2 Chronicles · chapter 34 · verse 14
2 Chronicles 34:14 in Kannada
ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.
Aadare kartana aalayakke tanda hanavannu avaru horage takkondu baruvaaga yaajaka naada hilkeeyanu mosheya kaiyindaada kartana nyaayapramaanada pustakavannu kandukondanu.
2 Chronicles 34:14 in English
- King James Version (KJV)
- And when they brought out the money that was brought into the house of the LORD, Hilkiah the priest found a book of the law of the LORD [given] by Moses.
- World English Bible (WEB)
- When they brought out the money that was brought into the LORD’s house, Hilkiah the priest found the book of the LORD’s law given by Moses.
- American Standard Version (ASV)
- And when they brought out the money that was brought into the house of Jehovah, Hilkiah the priest found the book of the law of Jehovah [given] by Moses.
- Bible in Basic English (BBE)
- Now when they were taking out the money which had come into the Lord's house, Hilkiah the priest came across the book of the law of the Lord, which he had given by the mouth of Moses.
- Darby Translation (DBY)
- And when they brought out the money that had been brought into the house of Jehovah, Hilkijah the priest found the book of the law of Jehovah by Moses.
- Webster's Bible (WBS)
- And when they brought out the money that was brought into the house of the LORD, Hilkiah the priest found the book of the law of the LORD [given] by Moses.
- Young's Literal Translation (YLT)
- And in their bringing out the money that is brought in to the house of Jehovah, hath Hilkiah the priest found the book of the law of Jehovah by the hand of Moses,
Read in context
- 12ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.
- 13ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.
- 14ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.
- 15ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
- 16ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.
Cross references
- Leviticus 8:36 ಯಾಜಕಕಾಂಡ 8:36ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Luke 2:39 ಲೂಕನು 2:39ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
- 2 Chronicles 34:9 2 ಪೂರ್ವಕಾಲವೃತ್ತಾಂತ 34:9ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
- Jeremiah 8:8 ಯೆರೆಮೀಯ 8:8ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
- 2 Chronicles 12:1 2 ಪೂರ್ವಕಾಲವೃತ್ತಾಂತ 12:1ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
- 2 Chronicles 31:4 2 ಪೂರ್ವಕಾಲವೃತ್ತಾಂತ 31:4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
- Isaiah 30:9 ಯೆಶಾಯ 30:9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
- Ezra 7:10 ಎಜ್ರನು 7:10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
- Deuteronomy 17:18–19 ಧರ್ಮೋಪದೇಶಕಾಂಡ 17:18–19ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- 2 Kings 22:8–20 2 ಅರಸುಗಳು 22:8–20ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು. ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು. ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು. ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ-- ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು. ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು. ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು. ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ. ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ -- ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು. ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.