2 Chronicles · chapter 34 · verse 21
2 Chronicles 34:21 in Kannada
ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
Neevu hogi nanagoska ravoo israayelinalliyoo yehoodadalliyoo ulidavarigoskaravoo sikkida pustakada maatu galannu kuritu kartanannu vichaarisiri. Yaakandare namma pitrugalu ee pustakadalli bareda ellaadara prakaara maadalu kartana vaakyavannu kaikollade iddadarinda namma mele surida kartana kopavu doddadaagide endu helidanu.
2 Chronicles 34:21 in English
- King James Version (KJV)
- Go, enquire of the LORD for me, and for them that are left in Israel and in Judah, concerning the words of the book that is found: for great [is] the wrath of the LORD that is poured out upon us, because our fathers have not kept the word of the LORD, to do after all that is written in this book.
- World English Bible (WEB)
- “Go inquire of the LORD for me, and for those who are left in Israel and in Judah, concerning the words of the book that is found; for great is the LORD’s wrath that is poured out on us, because our fathers have not kept the LORD’s word, to do according to all that is written in this book.”
- American Standard Version (ASV)
- Go ye, inquire of Jehovah for me, and for them that are left in Israel and in Judah, concerning the words of the book that is found; for great is the wrath of Jehovah that is poured out upon us, because our fathers have not kept the word of Jehovah, to do according unto all that is written in this book.
- Bible in Basic English (BBE)
- Go and get directions from the Lord for me and for those who are still in Israel and for Judah, about the words of this book which has come to light; for great is the wrath of the Lord which has been let loose on us, because our fathers have not kept the word of the Lord or done what is recorded in this book.
- Darby Translation (DBY)
- Go, inquire of Jehovah for me, and for them that are left in Israel and in Judah, concerning the words of the book which is found; for great is the wrath of Jehovah that is poured out upon us, because our fathers have not kept the word of Jehovah, to do according to all that is written in this book.
- Webster's Bible (WBS)
- Go, inquire of the LORD for me, and for them that are left in Israel, and in Judah, concerning the words of the book that is found: for great [is] the wrath of the LORD that is poured out upon us, because our fathers have not kept the word of the LORD, to do after all that is written in this book.
- Young's Literal Translation (YLT)
- 'Go, seek Jehovah for me, and for him who is left in Israel and in Judah, concerning the words of the book that is found, for great [is] the fury of Jehovah that is poured on us, because that our fathers kept not the word of Jehovah, to do according to all that is written on this book.'
Read in context
- 19ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
- 20ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
- 21ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
- 22ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)
- 23ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ
Cross references
- Ezekiel 14:1–11 ಯೆಹೆಜ್ಕೇಲನು 14:1–11ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು. ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ? ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ. ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು. ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ. ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ. ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ. ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು. ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು. ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 21:2 ಯೆರೆಮೀಯ 21:2ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- 2 Chronicles 28:6 2 ಪೂರ್ವಕಾಲವೃತ್ತಾಂತ 28:6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
- Jeremiah 42:2 ಯೆರೆಮೀಯ 42:2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- Romans 2:8–12 ರೋಮಾಪುರದವರಿಗೆ 2:8–12ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು. ದೇವರಲ್ಲಿ ಪಕ್ಷಪಾತವಿಲ್ಲ. ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
- 2 Kings 22:13 2 ಅರಸುಗಳು 22:13ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
- Deuteronomy 29:18–28 ಧರ್ಮೋಪದೇಶಕಾಂಡ 29:18–28ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು. ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Deuteronomy 32:15–25 ಧರ್ಮೋಪದೇಶಕಾಂಡ 32:15–25ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- Romans 4:15 ರೋಮಾಪುರದವರಿಗೆ 4:15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- 2 Chronicles 29:8 2 ಪೂರ್ವಕಾಲವೃತ್ತಾಂತ 29:8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
- Deuteronomy 31:16–22 ಧರ್ಮೋಪದೇಶಕಾಂಡ 31:16–22ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು. ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು. ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು. ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು.
- 1 Kings 22:5–7 1 ಅರಸುಗಳು 22:5–7ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು. ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.
Original words (Hebrew)
- Go · H3212יָלַךְ yâlak
- enquire · H1875דָּרַשׁ dârash
- left · H7604שָׁאַר shâʼar
- Israel · H3478יִשְׂרָאֵל Yisrâʼêl
- Judah · H3063יְהוּדָה Yᵉhûwdâh
- words · H1697דָּבָר dâbâr
- book · H5612סֵפֶר çêpher
- found · H4672מָצָא mâtsâʼ
- great · H1419גָּדוֹל gâdôwl
- wrath · H2534חֵמָה chêmâh
- out · H5413נָתַךְ nâthak
- fathers · H1אָב ʼâb
- kept · H8104שָׁמַר shâmar
- word · H1697דָּבָר dâbâr
- do · H6213עָשָׂה ʻâsâh
- written · H3789כָּתַב kâthab
- book · H5612סֵפֶר çêpher