2 Chronicles · chapter 34 · verse 30
2 Chronicles 34:30 in Kannada
ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.
Aaga arasanoo yehoodada samasta manushyaroo yeroosalemina nivaasigaloo yaaja karoo leviyaroo hirikiriyaraada samasta janaroo kartana aalayakke hodaru. Avanu kartana aalayadalli kandukonda odambadikeya pustakada maatugalannellaa avaru keluva haage odidanu.
2 Chronicles 34:30 in English
- King James Version (KJV)
- And the king went up into the house of the LORD, and all the men of Judah, and the inhabitants of Jerusalem, and the priests, and the Levites, and all the people, great and small: and he read in their ears all the words of the book of the covenant that was found in the house of the LORD.
- World English Bible (WEB)
- The king went up to the LORD’s house with all the men of Judah and the inhabitants of Jerusalem—the priests, the Levites, and all the people, both great and small—and he read in their hearing all the words of the book of the covenant that was found in the LORD’s house.
- American Standard Version (ASV)
- And the king went up to the house of Jehovah, and all the men of Judah and the inhabitants of Jerusalem, and the priests, and the Levites, and all the people, both great and small: and he read in their ears all the words of the book of the covenant that was found in the house of Jehovah.
- Bible in Basic English (BBE)
- And the king went up to the house of the Lord, with all the men of Judah and the people of Jerusalem, and the priests and the Levites and all the people, small and great; and they were present at his reading of the book of the law which had come to light in the house of the Lord.
- Darby Translation (DBY)
- And the king went up into the house of Jehovah, and all the men of Judah and the inhabitants of Jerusalem, and the priests and the Levites, and all the people, great and small; and he read in their ears all the words of the book of the covenant which had been found in the house of Jehovah.
- Webster's Bible (WBS)
- And the king went into the house of the LORD, and all the men of Judah and the inhabitants of Jerusalem, and the priests, and the Levites, and all the people, great and small: and he read in their ears all the words of the book of the covenant that was found in the house of the LORD.
- Young's Literal Translation (YLT)
- and the king goeth up to the house of Jehovah, and every man of Judah, and the inhabitants of Jerusalem, and the priests, and the Levites, even all the people, from great even unto small, and he readeth in their ears all the words of the book of the covenant that is found in the house of Jehovah.
Read in context
- 28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
- 29ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.
- 30ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.
- 31ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
- 32ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
Cross references
- 2 Kings 23:2 2 ಅರಸುಗಳು 23:2ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
- Exodus 24:7 ವಿಮೋಚನಕಾಂಡ 24:7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
- Nehemiah 8:1–5 ನೆಹೆಮೀಯ 8:1–5ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು. ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು. ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು. ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.
- 2 Chronicles 18:30 2 ಪೂರ್ವಕಾಲವೃತ್ತಾಂತ 18:30ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
- Jeremiah 31:31–32 ಯೆರೆಮೀಯ 31:31–32ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- 2 Chronicles 34:24 2 ಪೂರ್ವಕಾಲವೃತ್ತಾಂತ 34:24ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- 2 Kings 23:21 2 ಅರಸುಗಳು 23:21ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.
- Deuteronomy 17:18–20 ಧರ್ಮೋಪದೇಶಕಾಂಡ 17:18–20ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು. ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- 2 Chronicles 34:15 2 ಪೂರ್ವಕಾಲವೃತ್ತಾಂತ 34:15ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
- 2 Chronicles 34:18–19 2 ಪೂರ್ವಕಾಲವೃತ್ತಾಂತ 34:18–19ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು. ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
- 2 Chronicles 6:1–11 2 ಪೂರ್ವಕಾಲವೃತ್ತಾಂತ 6:1–11ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ. ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು. ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು. ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ. ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ. ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ. ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು. ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ. ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು. ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ ಕರ್ತನು ಇಸ್ರಾಯೇಲ್ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
Original words (Hebrew)
- king · H4428מֶלֶךְ melek
- up · H5927עָלָה ʻâlâh
- house · H1004בַּיִת bayith
- men · H376אִישׁ ʼîysh
- Judah · H3063יְהוּדָה Yᵉhûwdâh
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- priests · H3548כֹּהֵן kôhên
- Levites · H3881לֵוִיִּי Lêvîyîy
- people · H5971עַם ʻam
- great · H1419גָּדוֹל gâdôwl
- small · H6996קָטָן qâṭân
- read · H7121קָרָא qârâʼ
- ears · H241אֹזֶן ʼôzen
- words · H1697דָּבָר dâbâr
- book · H5612סֵפֶר çêpher
- covenant · H1285בְּרִית bᵉrîyth
- found · H4672מָצָא mâtsâʼ
- house · H1004בַּיִת bayith