2 Chronicles · chapter 34 · verse 33
2 Chronicles 34:33 in Kannada
ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
Heegeye yosheeyanu israayel makkalige idda ellaa deshagalolaginda samasta asahyagalannu tegedu haaki israayelinalli ulidiruvarellaroo tamma devaraada kartanannu sevisuva haage maadidanu. Avana divasagalellaa avaru tamma pitrugala deva raada kartanannu himbaalisuvadannu bidade iddaru.
2 Chronicles 34:33 in English
- King James Version (KJV)
- And Josiah took away all the abominations out of all the countries that [pertained] to the children of Israel, and made all that were present in Israel to serve, [even] to serve the LORD their God. [And] all his days they departed not from following the LORD, the God of their fathers.
- World English Bible (WEB)
- Josiah took away all the abominations out of all the countries that belonged to the children of Israel, and made all who were found in Israel to serve, even to serve the LORD their God. All his days they didn’t depart from following the LORD, the God of their fathers.
- American Standard Version (ASV)
- And Josiah took away all the abominations out of all the countries that pertained to the children of Israel, and made all that were found in Israel to serve, even to serve Jehovah their God. All his days they departed not from following Jehovah, the God of their fathers.
- Bible in Basic English (BBE)
- Josiah took away all the disgusting things out of all the lands of the children of Israel, and made all who were in Israel servants of the Lord their God. And as long as he was living they were true to the Lord, the God of their fathers.
- Darby Translation (DBY)
- And Josiah removed all the abominations out of all the countries that belonged to the children of Israel, and made to serve all that were found in Israel, — to serve Jehovah their God: all his days they did not depart from following Jehovah, the God of their fathers.
- Webster's Bible (WBS)
- And Josiah took away all the abominations out of all the countries that [pertained] to the children of Israel, and made all that were present in Israel, to serve, [even] to serve the LORD their God. [And] all his days they departed not from following the LORD, the God of their fathers.
- Young's Literal Translation (YLT)
- And Josiah turneth aside all the abominations out of all the lands that the sons of Israel have, and causeth every one who is found in Israel to serve, to serve Jehovah their God; all his days they turned not aside from after Jehovah, God of their fathers.
Read in context
- 31ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
- 32ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
- 33ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
Cross references
- 2 Chronicles 34:3–7 2 ಪೂರ್ವಕಾಲವೃತ್ತಾಂತ 34:3–7ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು. ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು. ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು. ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- Joshua 24:31 ಯೆಹೋಶುವ 24:31ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
- 1 Kings 11:5–7 1 ಅರಸುಗಳು 11:5–7ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು. ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
- Hosea 6:4 ಹೋಶೇಯ 6:4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
- Jeremiah 3:10 ಯೆರೆಮೀಯ 3:10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- 2 Kings 23:4–20 2 ಅರಸುಗಳು 23:4–20ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು. ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು. ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು. ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು. ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು. ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು. ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು. ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು. ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು. ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು. ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು. ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು. ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು. ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ, ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
Original words (Hebrew)
- Josiah · H2977יֹאשִׁיָּה Yôʼshîyâh
- away · H5493סוּר çûwr
- abominations · H8441תּוֹעֵבַה tôwʻêbah
- countries · H776אֶרֶץ ʼerets
- children · H1121בֵּן bên
- Israel · H3478יִשְׂרָאֵל Yisrâʼêl
- present · H4672מָצָא mâtsâʼ
- Israel · H3478יִשְׂרָאֵל Yisrâʼêl
- serve · H5647עָבַד ʻâbad
- serve · H5647עָבַד ʻâbad
- God · H430אֱלֹהִים ʼĕlôhîym
- days · H3117יוֹם yôwm
- departed · H5493סוּר çûwr
- following · H310אַחַר ʼachar
- God · H430אֱלֹהִים ʼĕlôhîym
- fathers · H1אָב ʼâb