2 Chronicles · chapter 35 · verse 17
2 Chronicles 35:17 in Kannada
ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.
Siddhavaagidda israayelina makkalu aa kaaladalli paskavannoo huli illada rottiya habbavannoo elu divasa aacharisidaru.
2 Chronicles 35:17 in English
- King James Version (KJV)
- And the children of Israel that were present kept the passover at that time, and the feast of unleavened bread seven days.
- World English Bible (WEB)
- The children of Israel who were present kept the Passover at that time, and the feast of unleavened bread seven days.
- American Standard Version (ASV)
- And the children of Israel that were present kept the passover at that time, and the feast of unleavened bread seven days.
- Bible in Basic English (BBE)
- And all the children of Israel who were present kept the Passover and the feast of unleavened bread at that time for seven days.
- Darby Translation (DBY)
- And the children of Israel that were present held the passover at that time, and the feast of unleavened bread seven days.
- Webster's Bible (WBS)
- And the children of Israel [that were] present kept the passover at that time, and the feast of unleavened bread seven days.
- Young's Literal Translation (YLT)
- And the sons of Israel who are found make the passover at that time, and the feast of unleavened things, seven days.
Read in context
- 15ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
- 16ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
- 17ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.
- 18ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
- 19ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು.
Cross references
- Exodus 12:15–20 ವಿಮೋಚನಕಾಂಡ 12:15–20ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು. ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- 2 Chronicles 30:21–23 2 ಪೂರ್ವಕಾಲವೃತ್ತಾಂತ 30:21–23ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು. ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು. ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು.
- Leviticus 23:5–8 ಯಾಜಕಕಾಂಡ 23:5–8ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Exodus 13:6–7 ವಿಮೋಚನಕಾಂಡ 13:6–7ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
- Deuteronomy 16:8 ಧರ್ಮೋಪದೇಶಕಾಂಡ 16:8ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Numbers 28:16–25 ಅರಣ್ಯಕಾಂಡ 28:16–25ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.
- Deuteronomy 16:3–4 ಧರ್ಮೋಪದೇಶಕಾಂಡ 16:3–4ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
- Exodus 34:18 ವಿಮೋಚನಕಾಂಡ 34:18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.