2 Chronicles · chapter 36 · verse 12
2 Chronicles 36:12 in Kannada
ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
Avanu tanna devaraada kartana sammukhadalli kettaddannu maadi kartana baayi maatu helida pravaadi yaada yereviాyana munde tannannu taggisikollade iddanu.
2 Chronicles 36:12 in English
- King James Version (KJV)
- And he did [that which was] evil in the sight of the LORD his God, [and] humbled not himself before Jeremiah the prophet [speaking] from the mouth of the LORD.
- World English Bible (WEB)
- He did that which was evil in the LORD his God’s sight. He didn’t humble himself before Jeremiah the prophet speaking from the LORD’s mouth.
- American Standard Version (ASV)
- and he did that which was evil in the sight of Jehovah his God; he humbled not himself before Jeremiah the prophet [speaking] from the mouth of Jehovah.
- Bible in Basic English (BBE)
- He did evil in the eyes of the Lord, and did not make himself low before Jeremiah the prophet who gave him the word of the Lord.
- Darby Translation (DBY)
- And he did evil in the sight of Jehovah his God; he humbled not himself before the prophet Jeremiah speaking from the mouth of Jehovah.
- Webster's Bible (WBS)
- And he did [that which was] evil in the sight of the LORD his God, [and] humbled not himself before Jeremiah the prophet [speaking] from the mouth of the LORD.
- Young's Literal Translation (YLT)
- and he doth the evil thing in the eyes of Jehovah his God, he hath not been humbled before Jeremiah the prophet [speaking] from the mouth of Jehovah;
Read in context
- 10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- 11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
- 12ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
- 13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
- 14ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
Cross references
- 2 Chronicles 33:23 2 ಪೂರ್ವಕಾಲವೃತ್ತಾಂತ 33:23ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
- Jeremiah 37:2–21 ಯೆರೆಮೀಯ 37:2–21ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ. ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು. ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ. ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು. ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು. ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು. ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು. ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು. ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು, ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು. ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
- Jeremiah 38:14–28 ಯೆರೆಮೀಯ 38:14–28ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು. ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು. ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು. ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು. ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು. ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ-- ಇಗೋ, ಯೆಹೂದದ ಅರಸನ ಮನೆ ಯಲ್ಲಿ ಉಳಿದ ಹೆಂಗಸರೆಲ್ಲರು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ತರಲ್ಪಟ್ಟು ಹೇಳುವದೇ ನಂದರೆ--ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ; ನಿನ್ನ ಕಾಲುಗಳು ಕೆಸರಿನಲ್ಲಿ ಮುಳುಗಿವೆ; ಆದರೆ ಅವರು ಹಿಂಜರಿದಿದ್ದಾರೆ. ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು. ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು. ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ-- ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು. ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು. ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
- 1 Peter 5:6 1 ಪೇತ್ರನು 5:6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- 2 Chronicles 32:26 2 ಪೂರ್ವಕಾಲವೃತ್ತಾಂತ 32:26ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
- 2 Chronicles 33:12 2 ಪೂರ್ವಕಾಲವೃತ್ತಾಂತ 33:12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
- Jeremiah 34:2–22 ಯೆರೆಮೀಯ 34:2–22ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು. ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ. ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ. ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ. ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು. ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು. ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು. ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು. ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು. ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ-- ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ. ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ. ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು. ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು. ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು. ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- James 4:10 ಯಾಕೋಬನು 4:10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Daniel 5:22–23 ದಾನಿಯೇಲನು 5:22–23ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Jeremiah 21:1–10 ಯೆರೆಮೀಯ 21:1–10ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು. ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ-- ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ. ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ. ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- 2 Chronicles 33:19 2 ಪೂರ್ವಕಾಲವೃತ್ತಾಂತ 33:19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.