2 Chronicles · chapter 36 · verse 16
2 Chronicles 36:16 in Kannada
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
Aadare kartana kopavu tanna janarige virodha vaagi eluva varegoo andare parihaaravaagadashtoo avaru devara sevakarannu apahaasyamaadi aatana vaakyagalannu tiraskarisi aatana pravaadigalige vanchane maadidaru.
2 Chronicles 36:16 in English
- King James Version (KJV)
- But they mocked the messengers of God, and despised his words, and misused his prophets, until the wrath of the LORD arose against his people, till [there was] no remedy.
- World English Bible (WEB)
- but they mocked the messengers of God, despised his words, and scoffed at his prophets, until the LORD’s wrath arose against his people, until there was no remedy.
- American Standard Version (ASV)
- but they mocked the messengers of God, and despised his words, and scoffed at his prophets, until the wrath of Jehovah arose against his people, till there was no remedy.
- Bible in Basic English (BBE)
- But they put shame on the servants of God, making sport of his words and laughing at his prophets, till the wrath of God was moved against his people, till there was no help.
- Darby Translation (DBY)
- But they mocked at the messengers of God, and despised his words, and scoffed at his prophets, until the fury of Jehovah rose against his people, and there was no remedy.
- Webster's Bible (WBS)
- But they mocked the messengers of God, and despised his words, and misused his prophets, until the wrath of the LORD arose against his people, till [there was] no remedy.
- Young's Literal Translation (YLT)
- and they are mocking at the messengers of God, and despising His words, and acting deceitfully with His prophets, till the going up of the fury of Jehovah against His people — till there is no healing.
Read in context
- 14ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
- 15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
- 16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- 17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- 18ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
Cross references
- Jeremiah 5:12–13 ಯೆರೆಮೀಯ 5:12–13ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ. ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
- 2 Chronicles 30:10 2 ಪೂರ್ವಕಾಲವೃತ್ತಾಂತ 30:10ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
- Luke 22:63–64 ಲೂಕನು 22:63–64ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು. ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
- Jeremiah 32:3 ಯೆರೆಮೀಯ 32:3ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Proverbs 6:15 ಜ್ಞಾನೋಕ್ತಿಗಳು 6:15ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
- Matthew 21:33–41 ಮತ್ತಾಯನು 21:33–41ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು. ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Proverbs 1:24–31 ಜ್ಞಾನೋಕ್ತಿಗಳು 1:24–31ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ. ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- Ezra 5:12 ಎಜ್ರನು 5:12ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
- Psalm 35:16 ಕೀರ್ತನೆಗಳು 35:16ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.