2 Chronicles · chapter 36 · verse 17
2 Chronicles 36:17 in Kannada
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
Aadadarinda aatanu avara mele kasdeeyara arasanannu baramaadidanu. Avanu avara parishuddha sthaanavaada aalayadalli avara praayastharannu kattiyinda konduhaakidanu. Praayasthana melaadaroo kanyaa streeya melaa daroo vruddhana melaadaroo atee vruddhana melaa daroo kanikarapadalilla. Aatanu samastavannu avana kaiyalli oppisidanu.
2 Chronicles 36:17 in English
- King James Version (KJV)
- Therefore he brought upon them the king of the Chaldees, who slew their young men with the sword in the house of their sanctuary, and had no compassion upon young man or maiden, old man, or him that stooped for age: he gave [them] all into his hand.
- World English Bible (WEB)
- Therefore he brought on them the king of the Chaldeans, who killed their young men with the sword in the house of their sanctuary, and had no compassion on young man or virgin, old man or infirm. He gave them all into his hand.
- American Standard Version (ASV)
- Therefore he brought upon them the king of the Chaldeans, who slew their young men with the sword in the house of their sanctuary, and had no compassion upon young man or virgin, old man or hoary-headed: he gave them all into his hand.
- Bible in Basic English (BBE)
- So he sent against them the king of the Chaldaeans, who put their young men to death with the sword in the house of their holy place, and had no pity for any, young man or virgin, old man or white-haired: God gave them all into his hands.
- Darby Translation (DBY)
- And he brought up [against] them the king of the Chaldees, and slew their young men with the sword in the house of their sanctuary, and spared not young man nor maiden, old man nor him of hoary head: he gave [them] all into his hand.
- Webster's Bible (WBS)
- Therefore he brought upon them the king of the Chaldees, who slew their young men with the sword in the house of their sanctuary, and had no compassion upon young man or maiden, old man, or him that stooped for age: he gave [them] all into his hand.
- Young's Literal Translation (YLT)
- And He causeth to go up against them the king of the Chaldeans, and he slayeth their chosen ones by the sword in the house of their sanctuary, and hath had no pity on young man and virgin, old man and very aged — the whole He hath given into his hand.
Read in context
- 15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
- 16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- 17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- 18ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
- 19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
Cross references
- Ezra 9:7 ಎಜ್ರನು 9:7ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
- Psalm 74:20 ಕೀರ್ತನೆಗಳು 74:20ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
- Ezekiel 9:5–7 ಯೆಹೆಜ್ಕೇಲನು 9:5–7ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ. ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು. ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
- Jeremiah 40:3 ಯೆರೆಮೀಯ 40:3ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
- 2 Kings 24:2–3 2 ಅರಸುಗಳು 24:2–3ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು. ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
- 2 Kings 25:1–30 2 ಅರಸುಗಳು 25:1–30ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು. ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು. ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು, ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು. ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು. ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು. ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು. ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು. ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು. ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು. ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು. ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು. ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು. ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು. ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು. ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು. ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು. ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು. ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು. ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು. ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು. ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
- 2 Chronicles 24:21 2 ಪೂರ್ವಕಾಲವೃತ್ತಾಂತ 24:21ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
- Deuteronomy 32:15–28 ಧರ್ಮೋಪದೇಶಕಾಂಡ 32:15–28ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು. ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.
- Daniel 9:14 ದಾನಿಯೇಲನು 9:14ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Deuteronomy 28:15–68 ಧರ್ಮೋಪದೇಶಕಾಂಡ 28:15–68ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು. ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Jeremiah 18:21 ಯೆರೆಮೀಯ 18:21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- Jeremiah 39:1–18 ಯೆರೆಮೀಯ 39:1–18ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು. ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು. ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು. ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು. ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು. ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು. ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ-- ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು. ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು. ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು. ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ-- ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು. ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ. ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
Original words (Hebrew)
- brought · H5927עָלָה ʻâlâh
- king · H4428מֶלֶךְ melek
- Chaldees · H3778כַּשְׂדִּי Kasdîy
- slew · H2026הָרַג hârag
- men · H970בָּחוּר bâchûwr
- sword · H2719חֶרֶב chereb
- house · H1004בַּיִת bayith
- sanctuary · H4720מִקְדָּשׁ miqdâsh
- compassion · H2550חָמַל châmal
- man · H970בָּחוּר bâchûwr
- maiden · H1330בְּתוּלָה bᵉthûwlâh
- man · H2205זָקֵן zâqên
- age · H3486יָשֵׁשׁ yâshêsh
- gave · H5414נָתַן nâthan
- hand · H3027יָד yâd