2 Chronicles · chapter 36 · verse 20
2 Chronicles 36:20 in Kannada
ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
Ida llade kattige tappidavarannu avanu baabelige oydanu. Avaru alli paarasiya raajyada aalvikeya paryantara, deshavu adara sabbattugalannu anubhavi suva paryantara, yereviాyana mukhaantaravaagi helida kartana vaakyavu eederuvadakke avanigoo avana makkaligoo sevakaraagiddaru.
2 Chronicles 36:20 in English
- King James Version (KJV)
- And them that had escaped from the sword carried he away to Babylon; where they were servants to him and his sons until the reign of the kingdom of Persia:
- World English Bible (WEB)
- He carried those who had escaped from the sword away to Babylon, and they were servants to him and his sons until the reign of the kingdom of Persia,
- American Standard Version (ASV)
- And them that had escaped from the sword carried he away to Babylon; and they were servants to him and his sons until the reign of the kingdom of Persia:
- Bible in Basic English (BBE)
- And all who had not come to death by the sword he took away prisoners to Babylon; and they became servants to him and to his sons till the kingdom of Persia came to power:
- Darby Translation (DBY)
- And them that had escaped from the sword he carried away to Babylon; and they became servants to him and his sons, until the reign of the kingdom of Persia;
- Webster's Bible (WBS)
- And them that had escaped from the sword he carried away to Babylon; where they were servants to him and his sons until the reign of the kingdom of Persia.
- Young's Literal Translation (YLT)
- And he removeth those left of the sword unto Babylon, and they are to him and to his sons for servants, till the reigning of the kingdom of Persia,
Read in context
- 18ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
- 19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
- 20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
- 21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- 22ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
Cross references
- Jeremiah 27:7 ಯೆರೆಮೀಯ 27:7ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- Ezra 1:1–11 ಎಜ್ರನು 1:1–11ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ-- ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು). ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು. ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು. ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು. ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು. ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು. ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು. ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
- 2 Kings 25:11 2 ಅರಸುಗಳು 25:11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
- 2 Chronicles 36:22 2 ಪೂರ್ವಕಾಲವೃತ್ತಾಂತ 36:22ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
- Deuteronomy 28:47–48 ಧರ್ಮೋಪದೇಶಕಾಂಡ 28:47–48ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.