2 Chronicles · chapter 36 · verse 6
2 Chronicles 36:6 in Kannada
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
Baabelina arasanaada nebookadnechcharanu avana mele bandu baabelige oyyuva haage avanige sankolegalannu haakisidanu.
2 Chronicles 36:6 in English
- King James Version (KJV)
- Against him came up Nebuchadnezzar king of Babylon, and bound him in fetters, to carry him to Babylon.
- World English Bible (WEB)
- Nebuchadnezzar king of Babylon came up against him, and bound him in fetters to carry him to Babylon.
- American Standard Version (ASV)
- Against him came up Nebuchadnezzar king of Babylon, and bound him in fetters, to carry him to Babylon.
- Bible in Basic English (BBE)
- Nebuchadnezzar, king of Babylon, came up against him, and took him away in chains to Babylon.
- Darby Translation (DBY)
- Against him came up Nebuchadnezzar king of Babylon, and bound him with chains of brass to carry him to Babylon.
- Webster's Bible (WBS)
- Against him came up Nebuchadnezzar king of Babylon, and bound him in fetters, to carry him to Babylon.
- Young's Literal Translation (YLT)
- against him hath Nebuchadnezzar king of Babylon come up, and bindeth him in brazen fetters to take him away to Babylon.
Read in context
- 4ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
- 5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
- 6ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
- 7ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
- 8ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
Cross references
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- Ezekiel 19:5–9 ಯೆಹೆಜ್ಕೇಲನು 19:5–9ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು. ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು. ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು. ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
- 2 Kings 24:1–2 2 ಅರಸುಗಳು 24:1–2ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು. ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
- Habakkuk 1:5–10 ಹಬಕ್ಕೂಕ 1:5–10ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ. ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು. ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ. ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು. ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು. ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- 2 Kings 24:5–6 2 ಅರಸುಗಳು 24:5–6ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
- 2 Kings 24:13–20 2 ಅರಸುಗಳು 24:13–20ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು. ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು. ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು. ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು. ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
- Daniel 1:1–2 ದಾನಿಯೇಲನು 1:1–2ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು. ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.