2 Chronicles · chapter 4 · verse 19
2 Chronicles 4:19 in Kannada
ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
Heegeye solomonanu kartana aalayada ellaa saamaanugalannoo bangaarada dhoopapeetha vannoo sammukhada rottigalannu iduva meju galannoo
2 Chronicles 4:19 in English
- King James Version (KJV)
- And Solomon made all the vessels that [were for] the house of God, the golden altar also, and the tables whereon the shewbread [was set;]
- World English Bible (WEB)
- Solomon made all the vessels that were in God’s house: the golden altar, the tables with the show bread on them,
- American Standard Version (ASV)
- And Solomon made all the vessels that were in the house of God, the golden altar also, and the tables whereon was the showbread;
- Bible in Basic English (BBE)
- And Solomon made all the vessels used in the house of God, the gold altar and the tables on which the holy bread was placed,
- Darby Translation (DBY)
- And Solomon made all the vessels that were [in] the house of God: the golden altar; and the tables whereon was the shewbread;
- Webster's Bible (WBS)
- And Solomon made all the vessels that [were for] the house of God, the golden altar also, and the tables on which the show-bread [was set] ;
- Young's Literal Translation (YLT)
- And Solomon maketh all the vessels that [are for] the house of God, and the altar of gold, and the tables, and on them [is] bread of the presence;
Read in context
- 17ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು.
- 18ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.
- 19ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
- 20ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
- 21ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
Cross references
- Revelation 9:13 ಪ್ರಕಟನೆ 9:13ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
- Jeremiah 28:3 ಯೆರೆಮೀಯ 28:3ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
- Exodus 30:1–10 ವಿಮೋಚನಕಾಂಡ 30:1–10ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- 1 Kings 7:48–50 1 ಅರಸುಗಳು 7:48–50ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು, ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- 2 Chronicles 4:8 2 ಪೂರ್ವಕಾಲವೃತ್ತಾಂತ 4:8ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
- Revelation 8:3 ಪ್ರಕಟನೆ 8:3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
- 2 Chronicles 36:10 2 ಪೂರ್ವಕಾಲವೃತ್ತಾಂತ 36:10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- Ezra 1:7–11 ಎಜ್ರನು 1:7–11ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು. ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು. ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು. ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
- 2 Kings 24:13 2 ಅರಸುಗಳು 24:13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- Daniel 5:2–3 ದಾನಿಯೇಲನು 5:2–3ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
- Jeremiah 52:18–19 ಯೆರೆಮೀಯ 52:18–19ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
- Leviticus 24:5–8 ಯಾಜಕಕಾಂಡ 24:5–8ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.