2 Chronicles · chapter 4 · verse 7
2 Chronicles 4:7 in Kannada
ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
Avugala maadariya prakaaravaagi hattu bangaarada deepastambhagalannu maadisi mandiradalli balagade aidannoo edagade aidannoo irisidanu.
2 Chronicles 4:7 in English
- King James Version (KJV)
- And he made ten candlesticks of gold according to their form, and set [them] in the temple, five on the right hand, and five on the left.
- World English Bible (WEB)
- He made the ten lamp stands of gold according to the ordinance concerning them; and he set them in the temple, five on the right hand and five on the left.
- American Standard Version (ASV)
- And he made the ten candlesticks of gold according to the ordinance concerning them; and he set them in the temple, five on the right hand, and five on the left.
- Bible in Basic English (BBE)
- And he made the ten gold supports for the lights, as directions had been given for them, and he put them in the Temple, five on the right side and five on the left.
- Darby Translation (DBY)
- And he made ten candlesticks of gold according to the ordinance respecting them, and set them in the temple, five on the right hand and five on the left.
- Webster's Bible (WBS)
- And he made ten candlesticks of gold according to their form, and set [them] in the temple, five on the right hand, and five on the left.
- Young's Literal Translation (YLT)
- And he maketh the ten candlesticks of gold, according to their ordinance, and placeth in the temple, five on the right, and five on the left.
Read in context
- 5ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
- 6ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
- 7ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
- 8ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
- 9ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
Cross references
- Exodus 25:31–40 ವಿಮೋಚನಕಾಂಡ 25:31–40ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು. ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು. ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ. ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- 1 Kings 7:49 1 ಅರಸುಗಳು 7:49ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,
- 1 Chronicles 28:12 1 ಪೂರ್ವಕಾಲವೃತ್ತಾಂತ 28:12ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Zechariah 4:11–14 ಜೆಕರ್ಯ 4:11–14ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು. ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು. ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು. ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- 1 Chronicles 28:19 1 ಪೂರ್ವಕಾಲವೃತ್ತಾಂತ 28:19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- Matthew 5:14–16 ಮತ್ತಾಯನು 5:14–16ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- 1 Chronicles 28:15 1 ಪೂರ್ವಕಾಲವೃತ್ತಾಂತ 28:15ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು.
- Revelation 1:20 ಪ್ರಕಟನೆ 1:20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
- Zechariah 4:2–3 ಜೆಕರ್ಯ 4:2–3ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು. ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.