2 Chronicles · chapter 5 · verse 4
2 Chronicles 5:4 in Kannada
ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು.
Israayelina hiriyarellaru bandaaga levi yaru manjooshavannu ettikondaru.
2 Chronicles 5:4 in English
- King James Version (KJV)
- And all the elders of Israel came; and the Levites took up the ark.
- World English Bible (WEB)
- All the elders of Israel came. The Levites took up the ark.
- American Standard Version (ASV)
- And all the elders of Israel came: and the Levites took up the ark;
- Bible in Basic English (BBE)
- All the responsible men of Israel came, and the Levites took up the ark.
- Darby Translation (DBY)
- And all the elders of Israel came; and the Levites took up the ark.
- Webster's Bible (WBS)
- And all the elders of Israel came; and the Levites took up the ark.
- Young's Literal Translation (YLT)
- and all the elders of Israel come in, and the Levites lift up the ark,
Read in context
- 2ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
- 3ಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು.
- 4ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು.
- 5ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು.
- 6ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
Cross references
- 1 Kings 8:3 1 ಅರಸುಗಳು 8:3ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.
- Joshua 3:6 ಯೆಹೋಶುವ 3:6ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Joshua 6:6 ಯೆಹೋಶುವ 6:6ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.
- 1 Chronicles 15:12–14 1 ಪೂರ್ವಕಾಲವೃತ್ತಾಂತ 15:12–14ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ. ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು. ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.
- 1 Chronicles 15:2 1 ಪೂರ್ವಕಾಲವೃತ್ತಾಂತ 15:2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
- 2 Chronicles 5:7 2 ಪೂರ್ವಕಾಲವೃತ್ತಾಂತ 5:7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.