2 Chronicles · chapter 6 · verse 17
2 Chronicles 6:17 in Kannada
ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.
Eega israayelina deva raada o kartane, ninna sevakanaada daaveedanige helida vaakyavu nishchayavaagali.
2 Chronicles 6:17 in English
- King James Version (KJV)
- Now then, O LORD God of Israel, let thy word be verified, which thou hast spoken unto thy servant David.
- World English Bible (WEB)
- Now therefore, LORD, the God of Israel, let your word be verified, which you spoke to your servant David.
- American Standard Version (ASV)
- Now therefore, O Jehovah, the God of Israel, let thy word be verified, which thou spakest unto thy servant David.
- Bible in Basic English (BBE)
- So now, O Lord, the God of Israel, make your word come true which you said to your servant David.
- Darby Translation (DBY)
- And now, Jehovah, God of Israel, let thy word be verified which thou hast spoken unto thy servant David.
- Webster's Bible (WBS)
- Now then, O LORD God of Israel, let thy word be verified, which thou hast spoken to thy servant David.
- Young's Literal Translation (YLT)
- 'And now, O Jehovah, God of Israel, is Thy word stedfast that Thou hast spoken to Thy servant, to David,
Read in context
- 15ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.
- 16ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.
- 17ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.
- 18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- 19ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
Cross references
- Jeremiah 11:5 ಯೆರೆಮೀಯ 11:5ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
- 2 Samuel 7:25–29 2 ಸಮುವೇಲನು 7:25–29ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು. ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ. ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು. ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು. ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
- Isaiah 41:17 ಯೆಶಾಯ 41:17ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
- Exodus 24:10 ವಿಮೋಚನಕಾಂಡ 24:10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
- 2 Chronicles 6:14 2 ಪೂರ್ವಕಾಲವೃತ್ತಾಂತ 6:14ಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.
- 2 Chronicles 6:4 2 ಪೂರ್ವಕಾಲವೃತ್ತಾಂತ 6:4ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
- Isaiah 45:3 ಯೆಶಾಯ 45:3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.