2 Chronicles · chapter 6 · verse 28
2 Chronicles 6:28 in Kannada
ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
Deshadalli baravu, jaadyavu, urigaaliyu, boodiyu, midite, kambalihula ivugalu iddare illave avara shatrugalu tamma svadeshada pattana galalli avarannu sankatapadisidare yaava baadhe yaava bene iddaroo tanna baadheyannoo vyasana vannoo tiliyuva obba manushyanaadaroo
2 Chronicles 6:28 in English
- King James Version (KJV)
- If there be dearth in the land, if there be pestilence, if there be blasting, or mildew, locusts, or caterpillers; if their enemies besiege them in the cities of their land; whatsoever sore or whatsoever sickness [there be:]
- World English Bible (WEB)
- “If there is famine in the land, if there is pestilence, if there is blight or mildew, locust or caterpillar; if their enemies besiege them in the land of their cities; whatever plague or whatever sickness there is—
- American Standard Version (ASV)
- If there be in the land famine, if there be pestilence, if there be blasting or mildew, locust or caterpillar; if their enemies besiege them in the land of their cities; whatsoever plague or whatsoever sickness there be;
- Bible in Basic English (BBE)
- If there is no food in the land, if there is disease, if the fruits of the earth are damaged by heat or water, locust or worm; if their towns are shut in by their attackers: whatever trouble or whatever disease there may be:
- Darby Translation (DBY)
- If there be famine in the land, if there be pestilence, if there be blight or mildew, locust or caterpillar; if their enemies besiege them in the land of their gates; whatever plague or whatever sickness there be:
- Webster's Bible (WBS)
- If there shall be dearth in the land, if there be pestilence, if there be blasting, or mildew, locusts, or caterpillars; if their enemies shall besiege them in the cities of their land; whatever calamity, or whatever sickness [there be] :
- Young's Literal Translation (YLT)
- 'Famine, when it is in the land, pestilence, when it is, blasting, and mildew, locust, and caterpillar, when they are, when its enemies have distressed it in the land — its gates, any plague and any sickness;
Read in context
- 26ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
- 27ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- 28ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
- 29ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ
- 30ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
Cross references
- James 5:13 ಯಾಕೋಬನು 5:13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
- Ruth 1:1 ರೂತಳು 1:1ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- Revelation 9:3–11 ಪ್ರಕಟನೆ 9:3–11ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು. ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು. ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು. ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು. ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು. ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು. ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು. ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
- Exodus 10:12–15 ವಿಮೋಚನಕಾಂಡ 10:12–15ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು. ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು. ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು. ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
- 2 Kings 6:25–29 2 ಅರಸುಗಳು 6:25–29ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು. ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು. ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- 2 Chronicles 20:5–13 2 ಪೂರ್ವಕಾಲವೃತ್ತಾಂತ 20:5–13ಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ? ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ? ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು. ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು. ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ. ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು. ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
- Joel 1:11 ಯೋವೇಲ 1:11ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
- 1 Kings 8:37–40 1 ಅರಸುಗಳು 8:37–40ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ, ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.
- 2 Chronicles 12:2–5 2 ಪೂರ್ವಕಾಲವೃತ್ತಾಂತ 12:2–5ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು. ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು. ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು. ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
- Deuteronomy 28:21–61 ಧರ್ಮೋಪದೇಶಕಾಂಡ 28:21–61ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು. ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
- Joel 1:4–7 ಯೋವೇಲ 1:4–7ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
Original words (Hebrew)
- dearth · H7458רָעָב râʻâb
- land · H776אֶרֶץ ʼerets
- pestilence · H1698דֶּבֶר deber
- blasting · H7711שְׁדֵפָה shᵉdêphâh
- mildew · H3420יֵרָקוֹן yêrâqôwn
- locusts · H697אַרְבֶּה ʼarbeh
- caterpillers · H2625חָסִיל châçîyl
- enemies · H341אֹיֵב ʼôyêb
- besiege · H6887צָרַר tsârar
- cities · H8179שַׁעַר shaʻar
- land · H776אֶרֶץ ʼerets
- sore · H5061נֶגַע negaʻ
- sickness · H4245מַחֲלֶה machăleh