2 Chronicles · chapter 6 · verse 35
2 Chronicles 6:35 in Kannada
ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
Neenu aakaashadinda avara praarthaneyannoo vijnyaapaneyannoo keli avara nyaayavannu teerisu.
2 Chronicles 6:35 in English
- King James Version (KJV)
- Then hear thou from the heavens their prayer and their supplication, and maintain their cause.
- World English Bible (WEB)
- then hear from heaven their prayer and their supplication, and maintain their cause.
- American Standard Version (ASV)
- then hear thou from heaven their prayer and their supplication, and maintain their cause.
- Bible in Basic English (BBE)
- Then give ear from heaven to their prayer and their cry for grace, and see right done to them.
- Darby Translation (DBY)
- then hear thou from the heavens their prayer and their supplication, and maintain their right.
- Webster's Bible (WBS)
- Then hear thou from the heavens their prayer and their supplication, and maintain their cause.
- Young's Literal Translation (YLT)
- then Thou hast heard from the heavens their prayer and their supplication, and hast maintained their cause.
Read in context
- 33ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
- 34ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
- 35ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
- 36ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
- 37ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
Cross references
- Daniel 9:17–19 ದಾನಿಯೇಲನು 9:17–19ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Psalm 9:3–4 ಕೀರ್ತನೆಗಳು 9:3–4ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು. ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
- Jeremiah 5:28 ಯೆರೆಮೀಯ 5:28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Isaiah 37:21–36 ಯೆಶಾಯ 37:21–36ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ. ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ? ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ; ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ. ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು; ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು. ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು. ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ. ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು. ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು. ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು. ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ. ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ. ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ. ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.