2 Chronicles · chapter 6 · verse 37
2 Chronicles 6:37 in Kannada
ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
Neenu avarannu shatruvina kaiyalli oppisiralaagi avaru sereyaagi oyyalpatta deshadalli manassu tirigisi pashchaattaapa pattu--naavu paapamaadiddeve, akrutyamaadi dushtaraagi nadediddeve endu tammannu sereyaagi oyyuvavara deshadalli ninage praarthane maadi
2 Chronicles 6:37 in English
- King James Version (KJV)
- Yet [if] they bethink themselves in the land whither they are carried captive, and turn and pray unto thee in the land of their captivity, saying, We have sinned, we have done amiss, and have dealt wickedly;
- World English Bible (WEB)
- yet if they come to their senses in the land where they are carried captive, and turn again, and make supplication to you in the land of their captivity, saying, ‘We have sinned, we have done perversely, and have dealt wickedly;’
- American Standard Version (ASV)
- yet if they shall bethink themselves in the land whither they are carried captive, and turn again, and make supplication unto thee in the land of their captivity, saying, We have sinned, we have done perversely, and have dealt wickedly;
- Bible in Basic English (BBE)
- And if they take thought, in the land where they are prisoners, turning again to you, crying out in prayer to you in that land, and saying, We are sinners, we have done wrong, we have done evil;
- Darby Translation (DBY)
- and if they shall take it to heart in the land whither they were carried captive, and repent, and make supplication unto thee in the land of their captivity, saying, We have sinned, we have done iniquity and have dealt perversely;
- Webster's Bible (WBS)
- Yet [if] they bethink themselves in the land whither they are carried captive, and turn and pray to thee in the land of their captivity, saying, We have sinned, we have done amiss, and have dealt wickedly;
- Young's Literal Translation (YLT)
- and they have turned [it] back unto their heart in the land whither they have been taken captive, and have turned back, and made supplication unto Thee in the land of their captivity, saying, We have sinned, we have done perversely, and have done wickedly;
Read in context
- 35ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
- 36ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
- 37ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
- 38ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ
- 39ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.
Cross references
- Luke 15:17–19 ಲೂಕನು 15:17–19ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
- Daniel 9:5–11 ದಾನಿಯೇಲನು 9:5–11ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
- Isaiah 64:6–12 ಯೆಶಾಯ 64:6–12ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ. ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ. ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ. ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ. ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು. ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ? ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Ezra 9:6–7 ಎಜ್ರನು 9:6–7ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು. ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
- Jeremiah 3:12–14 ಯೆರೆಮೀಯ 3:12–14ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ. ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ. ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- Job 33:27–28 ಯೋಬನು 33:27–28ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- Nehemiah 1:6 ನೆಹೆಮೀಯ 1:6ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.
- Psalm 106:6 ಕೀರ್ತನೆಗಳು 106:6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
- Nehemiah 9:26–30 ನೆಹೆಮೀಯ 9:26–30ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು. ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ. ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ. ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು. ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- Deuteronomy 30:1–3 ಧರ್ಮೋಪದೇಶಕಾಂಡ 30:1–3ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
- Deuteronomy 4:29–30 ಧರ್ಮೋಪದೇಶಕಾಂಡ 4:29–30ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು