2 Chronicles · chapter 7 · verse 19
2 Chronicles 7:19 in Kannada
ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
Aadare neevu hindirugi naanu nimma munde itta nanna kattalegalannoo aajnyegalannoo toredu anyadevarugalannu sevisi avugalige addabiddare
2 Chronicles 7:19 in English
- King James Version (KJV)
- But if ye turn away, and forsake my statutes and my commandments, which I have set before you, and shall go and serve other gods, and worship them;
- World English Bible (WEB)
- But if you turn away and forsake my statutes and my commandments which I have set before you, and go and serve other gods and worship them,
- American Standard Version (ASV)
- But if ye turn away, and forsake my statutes and my commandments which I have set before you, and shall go and serve other gods, and worship them;
- Bible in Basic English (BBE)
- But if you are turned away from me, and do not keep my orders and my laws which I have put before you, but go and make yourselves servants to other gods, giving them worship:
- Darby Translation (DBY)
- But if ye turn away and forsake my statutes and my commandments which I have set before you, and go and serve other gods and worship them;
- Webster's Bible (WBS)
- But if ye turn away, and forsake my statutes and my commandments, which I have set before you, and shall go and serve other gods, and worship them;
- Young's Literal Translation (YLT)
- and if ye turn back — ye — and have forsaken My statutes, and My commands, that I have placed before you, and have gone and served other gods, and bowed yourselves to them — then I have plucked them from off My ground that I have given to them,
Read in context
- 17ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ
- 18ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
- 19ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
- 20ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
- 21ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
Cross references
- Leviticus 26:14 ಯಾಜಕಕಾಂಡ 26:14ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
- Deuteronomy 28:15 ಧರ್ಮೋಪದೇಶಕಾಂಡ 28:15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- Leviticus 26:33–46 ಯಾಜಕಕಾಂಡ 26:33–46ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Deuteronomy 4:23–27 ಧರ್ಮೋಪದೇಶಕಾಂಡ 4:23–27ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ. ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ. ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ. ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Deuteronomy 28:36–68 ಧರ್ಮೋಪದೇಶಕಾಂಡ 28:36–68ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Joshua 23:15–16 ಯೆಹೋಶುವ 23:15–16ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು. ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- 1 Kings 11:4–8 1 ಅರಸುಗಳು 11:4–8ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ. ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು. ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು. ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
- 1 Kings 9:6–7 1 ಅರಸುಗಳು 9:6–7ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- 1 Samuel 12:25 1 ಸಮುವೇಲನು 12:25ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.