2 Chronicles · chapter 7 · verse 8
2 Chronicles 7:8 in Kannada
ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.
Ade kaala dalli solomonanu avana sangada hamaatina pradesha modalugondu aigupta nadiya varege iruva mahaa sabheyaada samasta israayelyaru elu divasa habbavannu maadidaru.
2 Chronicles 7:8 in English
- King James Version (KJV)
- Also at the same time Solomon kept the feast seven days, and all Israel with him, a very great congregation, from the entering in of Hamath unto the river of Egypt.
- World English Bible (WEB)
- So Solomon held the feast at that time for seven days, and all Israel with him, a very great assembly, from the entrance of Hamath to the brook of Egypt.
- American Standard Version (ASV)
- So Solomon held the feast at that time seven days, and all Israel with him, a very great assembly, from the entrance of Hamath unto the brook of Egypt.
- Bible in Basic English (BBE)
- So Solomon kept the feast at that time for seven days, and all Israel with him, a very great meeting, for the people had come together from the way into Hamath and from as far as the river of Egypt.
- Darby Translation (DBY)
- And at that time Solomon held the feast seven days, and all Israel with him, a very great congregation, from the entrance of Hamath unto the torrent of Egypt.
- Webster's Bible (WBS)
- Also at the same time Solomon kept the feast seven days, and all Israel with him, a very great congregation, from the entrance of Hamath to the river of Egypt.
- Young's Literal Translation (YLT)
- And solomon maketh the feast at that time seven days, and all Israel with him — a very great assembly — from the entering in of Hamath unto the brook of Egypt.
Read in context
- 6ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
- 7ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- 8ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.
- 9ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;
- 10ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
Cross references
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- Nehemiah 8:13–18 ನೆಹೆಮೀಯ 8:13–18ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು. ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು. ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ. ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು. ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು. ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
- 2 Chronicles 30:13 2 ಪೂರ್ವಕಾಲವೃತ್ತಾಂತ 30:13ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
- Zechariah 14:16–19 ಜೆಕರ್ಯ 14:16–19ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- Numbers 34:5–8 ಅರಣ್ಯಕಾಂಡ 34:5–8ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
- John 7:2 ಯೋಹಾನನು 7:2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- Joshua 13:3–5 ಯೆಹೋಶುವ 13:3–5ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ; ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು; ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
- Deuteronomy 16:13–15 ಧರ್ಮೋಪದೇಶಕಾಂಡ 16:13–15ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು. ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು. ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
- John 7:27–39 ಯೋಹಾನನು 7:27–39ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು. ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ. ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು. ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ. ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು. ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು. ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ. ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು. ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ? ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು. ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Leviticus 23:34–43 ಯಾಜಕಕಾಂಡ 23:34–43ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು. ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Numbers 29:12–38 ಅರಣ್ಯಕಾಂಡ 29:12–38ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು; ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು; ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು. ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು. ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
Original words (Hebrew)
- time · H6256עֵת ʻêth
- Solomon · H8010שְׁלֹמֹה Shᵉlômôh
- kept · H6213עָשָׂה ʻâsâh
- feast · H2282חַג chag
- seven · H7651שֶׁבַע shebaʻ
- days · H3117יוֹם yôwm
- Israel · H3478יִשְׂרָאֵל Yisrâʼêl
- very · H3966מְאֹד mᵉʼôd
- great · H1419גָּדוֹל gâdôwl
- congregation · H6951קָהָל qâhâl
- in · H935בּוֹא bôwʼ
- Hamath · H2574חֲמָת Chămâth
- river · H5158נַחַל nachal
- Egypt · H4714מִצְרַיִם Mitsrayim