2 Chronicles · chapter 8 · verse 15
2 Chronicles 8:15 in Kannada
ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ.
Avaru yaava kaarya dallaa daroo bokkasagalallaadaroo arasanu yaajakarigoo leviyarigoo helida aajnyeyannu toredu bidalilla.
2 Chronicles 8:15 in English
- King James Version (KJV)
- And they departed not from the commandment of the king unto the priests and Levites concerning any matter, or concerning the treasures.
- World English Bible (WEB)
- They didn’t depart from the commandment of the king to the priests and Levites concerning any matter or concerning the treasures.
- American Standard Version (ASV)
- And they departed not from the commandment of the king unto the priests and Levites concerning any matter, or concerning the treasures.
- Bible in Basic English (BBE)
- All the orders given by the king to the priests and Levites, in connection with any business or stores, were done with care.
- Darby Translation (DBY)
- and they did not depart from the commandment of the king to the priests and the Levites concerning any matter, nor concerning the treasures.
- Webster's Bible (WBS)
- And they departed not from the commandment of the king to the priests and Levites concerning any matter, or concerning the treasures.
- Young's Literal Translation (YLT)
- And they have not turned aside [from] the command of the king concerning the priests and the Levites, in reference to any matter, and to the treasures.
Read in context
- 13ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
- 14ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
- 15ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ.
- 16ಆದರೆ ಸೊಲೊಮೋನನ ಕೆಲಸವೆಲ್ಲಾ ಕರ್ತನ ಆಲಯದ ಅಸ್ತಿವಾರ ಹಾಕಿದ ದಿವಸದ ವರೆಗೂ ಅದನ್ನು ಕಟ್ಟಿಸಿ ತೀರಿಸುವ ಮಟ್ಟಿಗೂ ಸಿದ್ಧಮಾಡಲ್ಪಟ್ಟಿತು. ಹೀಗೆಯೇ ಕರ್ತನ ಆಲಯವು ಸಿದ್ಧವಾಯಿತು.
- 17ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
Cross references
- 1 Chronicles 9:29 1 ಪೂರ್ವಕಾಲವೃತ್ತಾಂತ 9:29ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
- 1 Kings 7:51 1 ಅರಸುಗಳು 7:51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- Exodus 39:42–43 ವಿಮೋಚನಕಾಂಡ 39:42–43ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು. ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- 2 Chronicles 30:12 2 ಪೂರ್ವಕಾಲವೃತ್ತಾಂತ 30:12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
- 1 Chronicles 26:20–26 1 ಪೂರ್ವಕಾಲವೃತ್ತಾಂತ 26:20–26ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು. ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.