2 Chronicles · chapter 9 · verse 22
2 Chronicles 9:22 in Kannada
ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
Heegeye arasanaada solomonanu aishvaryadalliyoo jnyaanada lliyoo bhoomiya samasta arasugaliginta doddavanaagiddanu.
2 Chronicles 9:22 in English
- King James Version (KJV)
- And king Solomon passed all the kings of the earth in riches and wisdom.
- World English Bible (WEB)
- So King Solomon exceeded all the kings of the earth in riches and wisdom.
- American Standard Version (ASV)
- So king Solomon exceeded all the kings of the earth in riches and wisdom.
- Bible in Basic English (BBE)
- And King Solomon was greater than all the kings of the earth in wealth and in wisdom.
- Darby Translation (DBY)
- And king Solomon was greater than all the kings of the earth in riches and wisdom.
- Webster's Bible (WBS)
- And king Solomon surpassed all the kings of the earth in riches and wisdom.
- Young's Literal Translation (YLT)
- And king Solomon becometh greater than any of the kings of the earth for riches and wisdom;
Read in context
- 20ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
- 21ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- 22ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
- 23ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
- 24ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
Cross references
- 2 Chronicles 1:12 2 ಪೂರ್ವಕಾಲವೃತ್ತಾಂತ 1:12ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- 1 Kings 4:30–31 1 ಅರಸುಗಳು 4:30–31ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು. ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
- 1 Kings 3:12–13 1 ಅರಸುಗಳು 3:12–13ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ. ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- Psalm 89:27 ಕೀರ್ತನೆಗಳು 89:27ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
- Colossians 2:2–3 ಕೊಲೊಸ್ಸೆಯವರಿಗೆ 2:2–3ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ; ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 1 Kings 10:23–24 1 ಅರಸುಗಳು 10:23–24ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
- Matthew 12:42 ಮತ್ತಾಯನು 12:42ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.