2 Corinthians · chapter 11 · verse 14
2 Corinthians 11:14 in Kannada
ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
Idenoo aashcharyavalla; yaakandare saitaananu belakina dootanante kaanisikolluva haage tannannu taane maarpadisikolluttaane.
2 Corinthians 11:14 in English
- King James Version (KJV)
- And no marvel; for Satan himself is transformed into an angel of light.
- World English Bible (WEB)
- And no wonder, for even Satan masquerades as an angel of light.
- American Standard Version (ASV)
- And no marvel; for even Satan fashioneth himself into an angel of light.
- Bible in Basic English (BBE)
- And it is no wonder; for even Satan himself is able to take the form of an angel of light.
- Darby Translation (DBY)
- And [it is] not wonderful, for Satan himself transforms himself into an angel of light.
- Webster's Bible (WBS)
- And no wonder; for Satan himself is transformed into an angel of light.
- Young's Literal Translation (YLT)
- and no wonder — for even the Adversary doth transform himself into a messenger of light;
Read in context
- 12ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
- 13ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
- 14ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
- 15ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- 16ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.
Cross references
- Galatians 1:8 ಗಲಾತ್ಯದವರಿಗೆ 1:8ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
- 2 Corinthians 2:11 2 ಕೊರಿಂಥದವರಿಗೆ 2:11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Matthew 4:1–10 ಮತ್ತಾಯನು 4:1–10ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು. ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು. ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು. ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು. ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ-- ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು. ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ-- ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು. ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Genesis 3:1–5 ಆದಿಕಾಂಡ 3:1–5ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು. ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು. ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು. ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ; ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.