2 Corinthians · chapter 11 · verse 22
2 Corinthians 11:22 in Kannada
ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
Avaru ibriyaro? Naanoo ibriyanu; avaru israayelyaro? Naanoo israaye lyanu; avaru abrahaamana vanshadavaro? Naanoo ade vanshadavanu;
2 Corinthians 11:22 in English
- King James Version (KJV)
- Are they Hebrews? so [am] I. Are they Israelites? so [am] I. Are they the seed of Abraham? so [am] I.
- World English Bible (WEB)
- Are they Hebrews? So am I. Are they Israelites? So am I. Are they the offspring of Abraham? So am I.
- American Standard Version (ASV)
- Are they Hebrews? so am I. Are they Israelites? so am I. Are they the seed of Abraham? so am I.
- Bible in Basic English (BBE)
- Are they Hebrews? so am I. Are they of Israel? so am I. Are they the seed of Abraham? so am I.
- Darby Translation (DBY)
- Are they Hebrews? I also. Are they Israelites? I also. Are they seed of Abraham? I also.
- Webster's Bible (WBS)
- Are they Hebrews? so [am] I. Are they Israelites? so [am] I. Are they the offspring of Abraham? so [am] I.
- Young's Literal Translation (YLT)
- Hebrews are they? I also! Israelites are they? I also! seed of Abraham are they? I also!
Read in context
- 20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
- 21ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
- 22ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
- 23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- 24ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
Cross references
- Philippians 3:5 ಫಿಲಿಪ್ಪಿಯವರಿಗೆ 3:5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
- Romans 11:1 ರೋಮಾಪುರದವರಿಗೆ 11:1ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
- Romans 9:4 ರೋಮಾಪುರದವರಿಗೆ 9:4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
- Exodus 9:13 ವಿಮೋಚನಕಾಂಡ 9:13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- John 8:33–39 ಯೋಹಾನನು 8:33–39ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ. ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ. ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ. ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ. ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು. ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
- Exodus 7:16 ವಿಮೋಚನಕಾಂಡ 7:16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
- 2 Chronicles 20:7 2 ಪೂರ್ವಕಾಲವೃತ್ತಾಂತ 20:7ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
- Exodus 9:1 ವಿಮೋಚನಕಾಂಡ 9:1ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
- Genesis 17:8–9 ಆದಿಕಾಂಡ 17:8–9ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು. ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
- Exodus 5:3 ವಿಮೋಚನಕಾಂಡ 5:3ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.