2 Corinthians · chapter 11 · verse 29
2 Corinthians 11:29 in Kannada
ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
Yaaraadaroo balavilladavanaadare naanu balavilladavanaagade iruveno? Yaaraadaroo muggarisidare naanu taapapadade iruveno?
2 Corinthians 11:29 in English
- King James Version (KJV)
- Who is weak, and I am not weak? who is offended, and I burn not?
- World English Bible (WEB)
- Who is weak, and I am not weak? Who is caused to stumble, and I don’t burn with indignation?
- American Standard Version (ASV)
- Who is weak, and I am not weak? who is caused to stumble, and I burn not?
- Bible in Basic English (BBE)
- Who is feeble and I am not feeble? who is in danger of falling, and I am not angry?
- Darby Translation (DBY)
- Who is weak, and I am not weak? Who is stumbled, and I burn not?
- Webster's Bible (WBS)
- Who is weak, and I am not weak? who is made to fall into sin, and I burn not?
- Young's Literal Translation (YLT)
- Who is infirm, and I am not infirm? who is stumbled, and I am not fired;
Read in context
- 27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- 28ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
- 29ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
- 30ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
- 31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
Cross references
- 1 Corinthians 8:13 1 ಕೊರಿಂಥದವರಿಗೆ 8:13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- 1 Corinthians 9:22 1 ಕೊರಿಂಥದವರಿಗೆ 9:22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- Galatians 4:8–20 ಗಲಾತ್ಯದವರಿಗೆ 4:8–20ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ. ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ? ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ. ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ. ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ. ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ. ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ. ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ? ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ. ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು. ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ. ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.
- Galatians 3:1–3 ಗಲಾತ್ಯದವರಿಗೆ 3:1–3ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ? ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ? ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ?
- Galatians 2:14 ಗಲಾತ್ಯದವರಿಗೆ 2:14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Romans 15:1 ರೋಮಾಪುರದವರಿಗೆ 15:1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
- Galatians 6:2 ಗಲಾತ್ಯದವರಿಗೆ 6:2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- 2 Corinthians 2:4–5 2 ಕೊರಿಂಥದವರಿಗೆ 2:4–5ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು. ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
- 1 Thessalonians 3:5–8 1 ಥೆಸಲೊನೀಕದವರಿಗೆ 3:5–8ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು. ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
- 1 Corinthians 12:26 1 ಕೊರಿಂಥದವರಿಗೆ 12:26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- Nehemiah 13:15–20 ನೆಹೆಮೀಯ 13:15–20ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು. ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು. ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು? ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ. ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು. ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.