2 Corinthians · chapter 3 · verse 9
2 Corinthians 3:9 in Kannada
ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
Aparaadha nirnayada seveyu prabhaavadindiruvadaadare neetiya seveyu eshto adhikavaada prabhaavavulladdaagirabeku.
2 Corinthians 3:9 in English
- King James Version (KJV)
- For if the ministration of condemnation [be] glory, much more doth the ministration of righteousness exceed in glory.
- World English Bible (WEB)
- For if the service of condemnation has glory, the service of righteousness exceeds much more in glory.
- American Standard Version (ASV)
- For if the ministration of condemnation hath glory, much rather doth the ministration of righteousness exceed in glory.
- Bible in Basic English (BBE)
- For if the operation of the law, producing punishment, had its glory, how much greater will be the operation of the Spirit causing righteousness?
- Darby Translation (DBY)
- For if the ministry of condemnation [be] glory, much rather the ministry of righteousness abounds in glory.
- Webster's Bible (WBS)
- For if the ministration of condemnation [was] glory, much more doth the ministration of righteousness exceed in glory.
- Young's Literal Translation (YLT)
- for if the ministration of the condemnation [is] glory, much more doth the ministration of the righteousness abound in glory;
Read in context
- 7ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
- 8ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
- 9ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
- 10ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು.
- 11ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ?
Cross references
- Hebrews 12:18–21 ಇಬ್ರಿಯರಿಗೆ 12:18–21ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು; (ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು. ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
- Romans 3:21–22 ರೋಮಾಪುರದವರಿಗೆ 3:21–22ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Isaiah 46:13 ಯೆಶಾಯ 46:13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Romans 5:15–21 ರೋಮಾಪುರದವರಿಗೆ 5:15–21ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ. ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ. ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ). ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು. ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು. ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Exodus 19:12–19 ವಿಮೋಚನಕಾಂಡ 19:12–19ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು. ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು. ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು. ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು. ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- Romans 4:11 ರೋಮಾಪುರದವರಿಗೆ 4:11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
- 2 Peter 1:1 2 ಪೇತ್ರನು 1:1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
- Exodus 20:18–19 ವಿಮೋಚನಕಾಂಡ 20:18–19ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು. ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
Original words (Greek)
- For · G1063γάρ gár
- if · G1487εἰ ei
- ministration · G1248διακονία diakonía
- condemnation · G2633κατάκρισις katákrisis
- glory · G1391δόξα dóxa
- much · G4183πολύς polýs
- more · G3123μᾶλλον mâllon
- doth · G4052περισσεύω perisseúō
- ministration · G1248διακονία diakonía
- righteousness · G1343δικαιοσύνη dikaiosýnē
- exceed · G4052περισσεύω perisseúō
- in · G1722ἐν en
- glory · G1391δόξα dóxa