2 Corinthians · chapter 4 · verse 8
2 Corinthians 4:8 in Kannada
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
Ellaa kadegalalli namage kalavala viddaroo naavu sankatapaduvavaralla; naavu dikku kaanadavaraagiddaroo kevala desegettavaralla.
2 Corinthians 4:8 in English
- King James Version (KJV)
- [We are] troubled on every side, yet not distressed; [we are] perplexed, but not in despair;
- World English Bible (WEB)
- We are pressed on every side, yet not crushed; perplexed, yet not to despair;
- American Standard Version (ASV)
- [we are] pressed on every side, yet not straitened; perplexed, yet not unto despair;
- Bible in Basic English (BBE)
- Troubles are round us on every side, but we are not shut in; things are hard for us, but we see a way out of them;
- Darby Translation (DBY)
- every way afflicted, but not straitened; seeing no apparent issue, but our way not entirely shut up;
- Webster's Bible (WBS)
- [We are] troubled on every side, yet not distressed; [we are] perplexed, but not in despair;
- Young's Literal Translation (YLT)
- on every side being in tribulation, but not straitened; perplexed, but not in despair;
Read in context
- 6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- 7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- 8ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
- 9ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- 10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
Cross references
- James 1:2–4 ಯಾಕೋಬನು 1:2–4ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ. ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- Romans 8:35–37 ರೋಮಾಪುರದವರಿಗೆ 8:35–37ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- 1 Peter 4:12–14 1 ಪೇತ್ರನು 4:12–14ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- 2 Corinthians 12:10 2 ಕೊರಿಂಥದವರಿಗೆ 12:10ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Psalm 56:2–3 ಕೀರ್ತನೆಗಳು 56:2–3ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ. ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
- 2 Corinthians 7:5 2 ಕೊರಿಂಥದವರಿಗೆ 7:5ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
- 1 Peter 1:6–7 1 ಪೇತ್ರನು 1:6–7ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Romans 5:3–5 ರೋಮಾಪುರದವರಿಗೆ 5:3–5ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Job 2:9–10 ಯೋಬನು 2:9–10ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು. ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- Psalm 37:33 ಕೀರ್ತನೆಗಳು 37:33ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- John 14:18 ಯೋಹಾನನು 14:18ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.