2 Corinthians · chapter 5 · verse 13
2 Corinthians 5:13 in Kannada
ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
Namage buddiparavashavaagiddare adu devarigaagi iruttade; illave namage svasthabuddhi iddare adu nimma nimittavaagi iruttade.
2 Corinthians 5:13 in English
- King James Version (KJV)
- For whether we be beside ourselves, [it is] to God: or whether we be sober, [it is] for your cause.
- World English Bible (WEB)
- For if we are beside ourselves, it is for God. Or if we are of sober mind, it is for you.
- American Standard Version (ASV)
- For whether we are beside ourselves, it is unto God; or whether we are of sober mind, it is unto you.
- Bible in Basic English (BBE)
- For if we are foolish, it is to God; or if we are serious, it is for you.
- Darby Translation (DBY)
- For whether we are beside ourselves, [it is] to God; or are sober, [it is] for you.
- Webster's Bible (WBS)
- For whether we are beside ourselves, [it is] to God: or whether we are sober, [it is] for your cause.
- Young's Literal Translation (YLT)
- for whether we were beside ourselves, [it was] to God; whether we be of sound mind — [it is] to you,
Read in context
- 11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
- 12ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ
- 13ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
- 14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
- 15ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
Cross references
- 2 Corinthians 11:16–17 2 ಕೊರಿಂಥದವರಿಗೆ 11:16–17ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ. ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
- 2 Corinthians 12:6 2 ಕೊರಿಂಥದವರಿಗೆ 12:6ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
- 2 Corinthians 11:1 2 ಕೊರಿಂಥದವರಿಗೆ 11:1ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- 1 Corinthians 4:10–13 1 ಕೊರಿಂಥದವರಿಗೆ 4:10–13ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Acts 26:24–25 ಅಪೊಸ್ತಲರ ಕೃತ್ಯಗಳು 26:24–25ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು. ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- 2 Samuel 6:21–22 2 ಸಮುವೇಲನು 6:21–22ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು. ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
- 2 Timothy 2:10 2 ತಿಮೊಥೆಯನಿಗೆ 2:10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- 1 Thessalonians 1:5 1 ಥೆಸಲೊನೀಕದವರಿಗೆ 1:5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- 1 Thessalonians 2:3–11 1 ಥೆಸಲೊನೀಕದವರಿಗೆ 2:3–11ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ; ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ. ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ. ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ. ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು. ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು. ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ. ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ. ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.