2 Corinthians · chapter 5 · verse 8
2 Corinthians 5:8 in Kannada
ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
Naavu dehavannu bittu kartana baliyalliye iruvadu uttamavendu aashisi bharavasavullavaraagiddeve.
2 Corinthians 5:8 in English
- King James Version (KJV)
- We are confident, [I say], and willing rather to be absent from the body, and to be present with the Lord.
- World English Bible (WEB)
- We are courageous, I say, and are willing rather to be absent from the body and to be at home with the Lord.
- American Standard Version (ASV)
- we are of good courage, I say, and are willing rather to be absent from the body, and to be at home with the Lord.
- Bible in Basic English (BBE)
- We are without fear, desiring to be free from the body, and to be with the Lord.
- Darby Translation (DBY)
- we are confident, I say, and pleased rather to be absent from the body and present with the Lord.
- Webster's Bible (WBS)
- We are confident, [I say] , and willing rather to be absent from the body, and to be present with the Lord.
- Young's Literal Translation (YLT)
- we have courage, and are well pleased rather to be away from the home of the body, and to be at home with the Lord.
Read in context
- 6ಹೀಗಿರುವದರಿಂದ ಶರೀರದ ಮನೆಯಲ್ಲಿರುವ ವರೆಗೂ ನಾವು ಕರ್ತನಿಗೆ ದೂರವಾಗಿದ್ದೇವೆಂದು ಬಲ್ಲವರಾಗಿ ನಾವು ಯಾವಾಗಲೂ ಭರವಸವುಳ್ಳವ ರಾಗಿದ್ದೇವೆ;
- 7(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
- 8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- 9ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
- 10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
Cross references
- Philippians 1:20–24 ಫಿಲಿಪ್ಪಿಯವರಿಗೆ 1:20–24ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
- 2 Corinthians 5:6 2 ಕೊರಿಂಥದವರಿಗೆ 5:6ಹೀಗಿರುವದರಿಂದ ಶರೀರದ ಮನೆಯಲ್ಲಿರುವ ವರೆಗೂ ನಾವು ಕರ್ತನಿಗೆ ದೂರವಾಗಿದ್ದೇವೆಂದು ಬಲ್ಲವರಾಗಿ ನಾವು ಯಾವಾಗಲೂ ಭರವಸವುಳ್ಳವ ರಾಗಿದ್ದೇವೆ;
- John 14:3 ಯೋಹಾನನು 14:3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 2 Corinthians 12:2–3 2 ಕೊರಿಂಥದವರಿಗೆ 12:2–3ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Psalm 73:23–26 ಕೀರ್ತನೆಗಳು 73:23–26ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ. ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ. ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- 2 Timothy 4:7–8 2 ತಿಮೊಥೆಯನಿಗೆ 4:7–8ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- 2 Corinthians 5:9 2 ಕೊರಿಂಥದವರಿಗೆ 5:9ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- 2 Peter 3:11–12 2 ಪೇತ್ರನು 3:11–12ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- 1 Thessalonians 4:17–18 1 ಥೆಸಲೊನೀಕದವರಿಗೆ 4:17–18ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ. ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.