2 Corinthians · chapter 7 · verse 9
2 Corinthians 7:9 in Kannada
ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
Aadaroo nimage duhkhavaayitendu naanu santoshapadade neevu duhkhapattu maanasaantara hondiddakkaagi eega santosha paduttene; yaakandare neevu devara chittaanusaara vaagi duhkhisiddarinda namminda yaavadaralliyoo neevu nashtapadalillavallaa.
2 Corinthians 7:9 in English
- King James Version (KJV)
- Now I rejoice, not that ye were made sorry, but that ye sorrowed to repentance: for ye were made sorry after a godly manner, that ye might receive damage by us in nothing.
- World English Bible (WEB)
- I now rejoice, not that you were grieved, but that you were grieved to repentance. For you were grieved in a godly way, that you might suffer loss by us in nothing.
- American Standard Version (ASV)
- I now rejoice, not that ye were made sorry, but that ye were made sorry unto repentance; for ye were made sorry after a godly sort, that ye might suffer loss by us in nothing.
- Bible in Basic English (BBE)
- Now I am glad, not that you had sorrow, but that your sorrow was the cause of a change of heart; for yours was a holy sorrow so that you might undergo no loss by us in anything.
- Darby Translation (DBY)
- Now I rejoice, not that ye have been grieved, but that ye have been grieved to repentance; for ye have been grieved according to God, that in nothing ye might be injured by us.
- Webster's Bible (WBS)
- Now I rejoice, not that ye were made sorry, but that ye sorrowed to repentance: for ye were made sorry after a godly manner, that ye might receive damage by us in nothing.
- Young's Literal Translation (YLT)
- I now do rejoice, not that ye were made sorry, but that ye were made sorry to reformation, for ye were made sorry toward God, that in nothing ye might receive damage from us;
Read in context
- 7ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
- 8ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
- 9ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
- 10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- 11ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
Cross references
- Luke 15:7 ಲೂಕನು 15:7ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Psalm 38:18 ಕೀರ್ತನೆಗಳು 38:18ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
- 2 Corinthians 13:8–10 2 ಕೊರಿಂಥದವರಿಗೆ 13:8–10ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ. ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ. ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
- Ecclesiastes 7:3 ಪ್ರಸಂಗಿ 7:3ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
- 2 Corinthians 7:10–11 2 ಕೊರಿಂಥದವರಿಗೆ 7:10–11ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ. ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- 2 Corinthians 10:8–10 2 ಕೊರಿಂಥದವರಿಗೆ 10:8–10ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು. ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ. ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
- Acts 20:21 ಅಪೊಸ್ತಲರ ಕೃತ್ಯಗಳು 20:21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
- Luke 15:17–24 ಲೂಕನು 15:17–24ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Luke 15:10 ಲೂಕನು 15:10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
Original words (Greek)
- Now · G3568νῦν nŷn
- rejoice · G5463χαίρω chaírō
- not · G3756οὐ ou
- that · G3754ὅτι hóti
- sorry · G3076λυπέω lypéō
- but · G235ἀλλά allá
- that · G3754ὅτι hóti
- sorrowed · G3076λυπέω lypéō
- to · G1519εἰς eis
- repentance · G3341μετάνοια metánoia
- for · G1063γάρ gár
- sorry · G3076λυπέω lypéō
- after · G2596κατά katá
- manner · G2316θεός theós
- that · G2443ἵνα hína
- damage · G2210ζημιόω zēmióō
- by · G1537ἐκ ek
- us · G2257ἡμῶν hēmōn
- in · G1722ἐν en
- nothing · G3367μηδείς mēdeís