2 Corinthians · chapter 8 · verse 12
2 Corinthians 8:12 in Kannada
ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
Obbanu koduvadakke manassiddare avanu tanage illaddakkanusaaravaagi alla, aadare iruvadakkanusaaravaagiye kottare adu samarpa kavaagiruvadu.
2 Corinthians 8:12 in English
- King James Version (KJV)
- For if there be first a willing mind, [it is] accepted according to that a man hath, [and] not according to that he hath not.
- World English Bible (WEB)
- For if the readiness is there, it is acceptable according to what you have, not according to what you don’t have.
- American Standard Version (ASV)
- For if the readiness is there, [it is] acceptable according as [a man] hath, not according as [he] hath not.
- Bible in Basic English (BBE)
- For if there is a ready mind, a man will have God's approval in the measure of what he has, and not of what he has not.
- Darby Translation (DBY)
- For if the readiness be there, [a man is] accepted according to what he may have, not according to what he has not.
- Webster's Bible (WBS)
- For if there is first a willing mind, [it is] accepted according to what a man hath, [and] not according to what he hath not.
- Young's Literal Translation (YLT)
- for if the willing mind is present, according to that which any one may have it is well-accepted, not according to that which he hath not;
Read in context
- 10ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
- 11ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.
- 12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- 13ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.
- 14ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
Cross references
- Mark 12:42–44 ಮಾರ್ಕನು 12:42–44ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು. ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು. ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
- Luke 21:1–4 ಲೂಕನು 21:1–4ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು. ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು. ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ; ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
- 2 Corinthians 9:7 2 ಕೊರಿಂಥದವರಿಗೆ 9:7ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
- Exodus 35:29 ವಿಮೋಚನಕಾಂಡ 35:29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
- Exodus 35:21–22 ವಿಮೋಚನಕಾಂಡ 35:21–22ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು. ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
- Exodus 35:5 ವಿಮೋಚನಕಾಂಡ 35:5ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
- Exodus 25:2 ವಿಮೋಚನಕಾಂಡ 25:2ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- Luke 16:10 ಲೂಕನು 16:10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
- 1 Chronicles 29:3–18 1 ಪೂರ್ವಕಾಲವೃತ್ತಾಂತ 29:3–18ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು. ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು. ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು. ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು. ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Mark 14:7–8 ಮಾರ್ಕನು 14:7–8ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.