2 Kings · chapter 10 · verse 3
2 Kings 10:3 in Kannada
ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.
Neevu nimma yaja maanana kumaararalli uttamanaagiruva mattu samarthanaagiruvavanannu nodikondu ava nannu avana tandeya sinhaasanada mele koodrisi nimma yajamaanana maneyavarigoskara yuddha maadiri endu tilisidanu.
2 Kings 10:3 in English
- King James Version (KJV)
- Look even out the best and meetest of your master’s sons, and set [him] on his father’s throne, and fight for your master’s house.
- World English Bible (WEB)
- select the best and fittest of your master’s sons, set him on his father’s throne, and fight for your master’s house.”
- American Standard Version (ASV)
- look ye out the best and meetest of your master’s sons, and set him on his father’s throne, and fight for your master’s house.
- Bible in Basic English (BBE)
- Take the best and most upright of your master's sons, and make him king in his father's place, and put up a fight for your master's family.
- Darby Translation (DBY)
- look out the best and worthiest of your master's sons, and set him on his father's throne, and fight for your master's house.
- Webster's Bible (WBS)
- Look out the best and meetest of your master's sons, and set [him] on his father's throne, and fight for your master's house.
- Young's Literal Translation (YLT)
- and ye have seen the best and the uprightest of the sons of your lord, and have set [him] on the throne of his father, and fight ye for the house of your lord.'
Read in context
- 1ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--
- 2ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ
- 3ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.
- 4ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.
- 5ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
Cross references
- John 18:36 ಯೋಹಾನನು 18:36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- 2 Samuel 2:8–9 2 ಸಮುವೇಲನು 2:8–9ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.
- 1 Kings 12:20–21 1 ಅರಸುಗಳು 12:20–21ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ. ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
- Deuteronomy 17:14–15 ಧರ್ಮೋಪದೇಶಕಾಂಡ 17:14–15ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
- 1 Kings 1:24–25 1 ಅರಸುಗಳು 1:24–25ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ? ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
- 1 Samuel 11:15 1 ಸಮುವೇಲನು 11:15ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
- 1 Samuel 10:24 1 ಸಮುವೇಲನು 10:24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
- 2 Samuel 2:12–17 2 ಸಮುವೇಲನು 2:12–17ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು. ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು. ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು. ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು. ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು. ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.