2 Kings · chapter 11 · verse 21
2 Kings 11:21 in Kannada
ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
Yehovaashanu elu varushadavanaa giddaaga aalalu aarambhisidanu.
2 Kings 11:21 in English
- King James Version (KJV)
- Seven years old [was] Jehoash when he began to reign.
- World English Bible (WEB)
- Jehoash was seven years old when he began to reign.
- American Standard Version (ASV)
- Jehoash was seven years old when he began to reign.
- Bible in Basic English (BBE)
- And Jehoash was seven years old when he became king.
- Darby Translation (DBY)
- Jehoash was seven years old when he began to reign.
- Webster's Bible (WBS)
- Seven years old [was] Jehoash when he began to reign.
- Young's Literal Translation (YLT)
- a son of seven years is Jehoash in his reigning.
Read in context
- 19ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
- 20ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
- 21ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
Cross references
- 2 Chronicles 24:1–14 2 ಪೂರ್ವಕಾಲವೃತ್ತಾಂತ 24:1–14ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು. ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು. ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು. ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು. ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು. ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ? ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು. ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು. ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು. ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು. ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು. ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು. ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- 2 Kings 11:4 2 ಅರಸುಗಳು 11:4ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
- 2 Kings 22:1 2 ಅರಸುಗಳು 22:1ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು.