2 Kings · chapter 13 · verse 6
2 Kings 13:6 in Kannada
ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
Aadare avaru israayelyarannu paapamaadalu prerepisida yaarobbaamana maneya paapa galannu bittu bidade avugalalle nadedaru. Idallade samaaryadalli topu neleyaagittu.
2 Kings 13:6 in English
- King James Version (KJV)
- Nevertheless they departed not from the sins of the house of Jeroboam, who made Israel sin, [but] walked therein: and there remained the grove also in Samaria.)
- World English Bible (WEB)
- Nevertheless they didn’t depart from the sins of the house of Jeroboam, with which he made Israel to sin, but walked in them; and the Asherah also remained in Samaria.)
- American Standard Version (ASV)
- Nevertheless they departed not from the sins of the house of Jeroboam, wherewith he made Israel to sin, but walked therein: and there remained the Asherah also in Samaria.)
- Bible in Basic English (BBE)
- But still they did not give up the sin of Jeroboam, which he made Israel do, but went on with it; and there was an image of Asherah in Samaria.)
- Darby Translation (DBY)
- Nevertheless they departed not from the sins of the house of Jeroboam, who made Israel to sin: they walked therein; and there remained also the Asherah in Samaria.)
- Webster's Bible (WBS)
- Nevertheless they departed not from the sins of the house of Jeroboam, who made Israel sin, [but] walked in them: and there remained the grove also in Samaria.)
- Young's Literal Translation (YLT)
- only, they have not turned aside from the sins of the house of Jeroboam, that he caused Israel to sin, therein they walked, and also, the shrine hath remained in Samaria, —
Read in context
- 4ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.
- 5ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
- 6ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
- 7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
- 8ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
Cross references
- 1 Kings 16:33 1 ಅರಸುಗಳು 16:33ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- 2 Kings 13:2 2 ಅರಸುಗಳು 13:2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
- 2 Kings 18:4 2 ಅರಸುಗಳು 18:4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- Deuteronomy 7:5 ಧರ್ಮೋಪದೇಶಕಾಂಡ 7:5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- Deuteronomy 32:15–18 ಧರ್ಮೋಪದೇಶಕಾಂಡ 32:15–18ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- 2 Kings 23:4 2 ಅರಸುಗಳು 23:4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
- 1 Kings 16:26 1 ಅರಸುಗಳು 16:26ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
- 1 Kings 15:3 1 ಅರಸುಗಳು 15:3ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
- 2 Kings 17:16 2 ಅರಸುಗಳು 17:16ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
- 2 Kings 10:29 2 ಅರಸುಗಳು 10:29ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
- 2 Kings 17:20–23 2 ಅರಸುಗಳು 17:20–23ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು. ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.