2 Kings · chapter 14 · verse 27
2 Kings 14:27 in Kannada
ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
Idallade israayelina naamavannu aakaashada kelagininda alisi biduvenendu kartanu heliddilla; aadare yovaashana maganaada yaarobbaamana kaiyinda avarannu rakshisidanu.
2 Kings 14:27 in English
- King James Version (KJV)
- And the LORD said not that he would blot out the name of Israel from under heaven: but he saved them by the hand of Jeroboam the son of Joash.
- World English Bible (WEB)
- The LORD didn’t say that he would blot out the name of Israel from under the sky; but he saved them by the hand of Jeroboam the son of Joash.
- American Standard Version (ASV)
- And Jehovah said not that he would blot out the name of Israel from under heaven; but he saved them by the hand of Jeroboam the son of Joash.
- Bible in Basic English (BBE)
- And the Lord had not said that the name of Israel was to be taken away from the earth; but he gave them a saviour in Jeroboam, the son of Joash.
- Darby Translation (DBY)
- And Jehovah had not said that he would blot out the name of Israel from under the heavens; and he saved them by the hand of Jeroboam the son of Joash.
- Webster's Bible (WBS)
- And the LORD said not that he would blot out the name of Israel from under heaven: but he saved them by the hand of Jeroboam the son of Joash.
- Young's Literal Translation (YLT)
- and Jehovah hath not spoken to blot out the name of Israel from under the heavens, and saveth them by the hand of Jeroboam son of Joash.
Read in context
- 25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
- 26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
- 27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
- 28ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
- 29ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
Cross references
- 2 Kings 13:23 2 ಅರಸುಗಳು 13:23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
- 2 Kings 13:5 2 ಅರಸುಗಳು 13:5ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
- Deuteronomy 9:14 ಧರ್ಮೋಪದೇಶಕಾಂಡ 9:14ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
- Romans 11:2–12 ರೋಮಾಪುರದವರಿಗೆ 11:2–12ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ-- ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ? ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು. (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ. ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು. ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Psalm 69:28 ಕೀರ್ತನೆಗಳು 69:28ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- Hosea 1:6–7 ಹೋಶೇಯ 1:6–7ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ. ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Exodus 32:32–33 ವಿಮೋಚನಕಾಂಡ 32:32–33ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು. ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
- 2 Kings 5:1 2 ಅರಸುಗಳು 5:1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
- Deuteronomy 25:19 ಧರ್ಮೋಪದೇಶಕಾಂಡ 25:19ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Titus 3:4–6 ತೀತನಿಗೆ 3:4–6ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.