2 Kings · chapter 14 · verse 3
2 Kings 14:3 in Kannada
ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.
Avanu kartana drushtige olledannu maadi danu; aadare tanna pitruvaada daaveedana haagalla; tanna tandeyaada yehovaashanu maadida haage ellavannu maadidanu.
2 Kings 14:3 in English
- King James Version (KJV)
- And he did [that which was] right in the sight of the LORD, yet not like David his father: he did according to all things as Joash his father did.
- World English Bible (WEB)
- He did that which was right in the LORD’s eyes, yet not like David his father. He did according to all that Joash his father had done.
- American Standard Version (ASV)
- And he did that which was right in the eyes of Jehovah, yet not like David his father: he did according to all that Joash his father had done.
- Bible in Basic English (BBE)
- He did what was right in the eyes of the Lord, though not like David his father; he did as Joash his father had done.
- Darby Translation (DBY)
- And he did what was right in the sight of Jehovah, yet not like David his father: he did according to all that Joash his father had done.
- Webster's Bible (WBS)
- And he did [that which was] right in the sight of the LORD, yet not like David his father: he did according to all things as Joash his father did.
- Young's Literal Translation (YLT)
- and he doth that which [is] right in the eyes of Jehovah, only not like David his father, according to all that Joash his father did he hath done,
Read in context
- 1ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
- 2ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಇಪ್ಪತ್ತೊಂಭತ್ತು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯು ಯೆರೂಸಲೇಮಿನವಳಾದ ಯೆಹೋವ ದ್ದೀನ್.
- 3ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.
- 4ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
- 5ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.
Cross references
- 2 Chronicles 25:2–3 2 ಪೂರ್ವಕಾಲವೃತ್ತಾಂತ 25:2–3ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ. ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು.
- 2 Chronicles 24:2 2 ಪೂರ್ವಕಾಲವೃತ್ತಾಂತ 24:2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
- 2 Chronicles 24:17 2 ಪೂರ್ವಕಾಲವೃತ್ತಾಂತ 24:17ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
- 2 Kings 12:2 2 ಅರಸುಗಳು 12:2ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
- 2 Chronicles 25:14–16 2 ಪೂರ್ವಕಾಲವೃತ್ತಾಂತ 25:14–16ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು. ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು. ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- 1 Peter 1:18 1 ಪೇತ್ರನು 1:18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
- Zechariah 1:4–6 ಜೆಕರ್ಯ 1:4–6ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Jeremiah 16:19 ಯೆರೆಮೀಯ 16:19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- 1 Kings 11:4 1 ಅರಸುಗಳು 11:4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
- 1 Kings 15:3 1 ಅರಸುಗಳು 15:3ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.