2 Kings · chapter 14 · verse 8
2 Kings 14:8 in Kannada
ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
Aaga amachyanu israayelyara arasanaada yehuvina maganaagiruva yehovaahaajana maganaada yovaashana balige sevakarannu kalu hisi--naavu obbara mukhavannu obbaru noduva haage baa endu helidanu.
2 Kings 14:8 in English
- King James Version (KJV)
- Then Amaziah sent messengers to Jehoash, the son of Jehoahaz son of Jehu, king of Israel, saying, Come, let us look one another in the face.
- World English Bible (WEB)
- Then Amaziah sent messengers to Jehoash, the son of Jehoahaz son of Jehu, king of Israel, saying, “Come, let’s look one another in the face.”
- American Standard Version (ASV)
- Then Amaziah sent messengers to Jehoash, the son of Jehoahaz son of Jehu, king of Israel, saying, Come, let us look one another in the face.
- Bible in Basic English (BBE)
- Then Amaziah sent representatives to Jehoash, the son of Jehoahaz, son of Jehu, king of Israel, saying, Come, let us have a meeting face to face.
- Darby Translation (DBY)
- Then Amaziah sent messengers to Jehoash the son of Jehoahaz, son of Jehu, king of Israel, saying, Come, let us look one another in the face.
- Webster's Bible (WBS)
- Then Amaziah sent messengers to Jehoash the son of Jehoahaz son of Jehu king of Israel, saying, Come, let us look one another in the face.
- Young's Literal Translation (YLT)
- then hath Amaziah sent messengers unto Jehoash son of Jehoahaz, son of Jehu, king of Israel, saying, 'Come, we look one another in the face.'
Read in context
- 6ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
- 7ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
- 8ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
- 9ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.
- 10ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
Cross references
- 2 Chronicles 25:17–24 2 ಪೂರ್ವಕಾಲವೃತ್ತಾಂತ 25:17–24ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು. ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು. ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು. ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು. ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು. ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು. ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.
- 2 Kings 14:11 2 ಅರಸುಗಳು 14:11ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.
- 2 Samuel 2:14–17 2 ಸಮುವೇಲನು 2:14–17ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು. ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು. ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು. ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
- Proverbs 18:6 ಜ್ಞಾನೋಕ್ತಿಗಳು 18:6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Proverbs 13:10 ಜ್ಞಾನೋಕ್ತಿಗಳು 13:10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- Proverbs 25:8 ಜ್ಞಾನೋಕ್ತಿಗಳು 25:8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
Original words (Hebrew)
- Amaziah · H558אֲמַצְיָה ʼĂmatsyâh
- sent · H7971שָׁלַח shâlach
- messengers · H4397מֲלְאָךְ mălʼâk
- Jehoash · H3060יְהוֹאָשׁ Yᵉhôwʼâsh
- son · H1121בֵּן bên
- Jehoahaz · H3059יְהוֹאָחָז Yᵉhôwʼâchâz
- son · H1121בֵּן bên
- Jehu · H3058יֵהוּא Yêhûwʼ
- king · H4428מֶלֶךְ melek
- Israel · H3478יִשְׂרָאֵל Yisrâʼêl
- saying · H559אָמַר ʼâmar
- Come · H3212יָלַךְ yâlak
- look · H7200רָאָה râʼâh
- face · H6440פָּנִים pânîym