2 Kings · chapter 17 · verse 18
2 Kings 17:18 in Kannada
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
Aadadarinda kartanu israayelina mele bahukopa gondu avarannu tanna sammukhadinda tegeduhaaki danu. Yehoodada gotrada horataagi inyaaroo ulidaddilla.
2 Kings 17:18 in English
- King James Version (KJV)
- Therefore the LORD was very angry with Israel, and removed them out of his sight: there was none left but the tribe of Judah only.
- World English Bible (WEB)
- Therefore the LORD was very angry with Israel, and removed them out of his sight. There was none left but the tribe of Judah only.
- American Standard Version (ASV)
- Therefore Jehovah was very angry with Israel, and removed them out of his sight: there was none left but the tribe of Judah only.
- Bible in Basic English (BBE)
- So the Lord was very angry with Israel, and his face was turned away from them: only the tribe of Judah kept its place.
- Darby Translation (DBY)
- Therefore Jehovah was very angry with Israel, and removed them out of his sight: there remained but the tribe of Judah only.
- Webster's Bible (WBS)
- Therefore the LORD was very angry with Israel, and removed them out of his sight: there was none left but the tribe of Judah only.
- Young's Literal Translation (YLT)
- That Jehovah sheweth himself very angry against Israel, and turneth them aside from His presence; none hath been left, only the tribe of Judah by itself.
Read in context
- 16ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
- 17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
- 18ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
- 19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
- 20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
Cross references
- 1 Kings 12:20 1 ಅರಸುಗಳು 12:20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 1 Kings 11:13 1 ಅರಸುಗಳು 11:13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- 1 Kings 11:32 1 ಅರಸುಗಳು 11:32(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)
- Hosea 11:12 ಹೋಶೇಯ 11:12ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
- Deuteronomy 32:21–26 ಧರ್ಮೋಪದೇಶಕಾಂಡ 32:21–26ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- Hosea 9:3 ಹೋಶೇಯ 9:3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- 2 Kings 23:27 2 ಅರಸುಗಳು 23:27ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
- Jeremiah 15:1 ಯೆರೆಮೀಯ 15:1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
- Joshua 23:15 ಯೆಹೋಶುವ 23:15ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- 2 Kings 13:23 2 ಅರಸುಗಳು 13:23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
- Deuteronomy 29:20–28 ಧರ್ಮೋಪದೇಶಕಾಂಡ 29:20–28ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.