2 Kings · chapter 18 · verse 12
2 Kings 18:12 in Kannada
ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
Avaru tamma devaraada kartana shabdavannu kelade aatana odambadikeyannoo kartana sevakanaada mosheyu aajnyaapisidda ella vannoo viాridaru; avugalannu keladeyoo maada deyoo hodaru.
2 Kings 18:12 in English
- King James Version (KJV)
- Because they obeyed not the voice of the LORD their God, but transgressed his covenant, [and] all that Moses the servant of the LORD commanded, and would not hear [them], nor do [them].
- World English Bible (WEB)
- because they didn’t obey the LORD their God’s voice, but transgressed his covenant, even all that Moses the servant of the LORD commanded, and would not hear it or do it.
- American Standard Version (ASV)
- because they obeyed not the voice of Jehovah their God, but transgressed his covenant, even all that Moses the servant of Jehovah commanded, and would not hear it, nor do it.
- Bible in Basic English (BBE)
- Because they did not give ear to the voice of the Lord their God, but went against his agreement, even against everything ordered by Moses, the servant of the Lord, and they did not give ear to it or do it.
- Darby Translation (DBY)
- because they hearkened not to the voice of Jehovah their God, but transgressed his covenant, all that Moses the servant of Jehovah commanded; and they would not hear nor do it.
- Webster's Bible (WBS)
- Because they obeyed not the voice of the LORD their God, but transgressed his covenant, [and] all that Moses the servant of the LORD commanded, and would not hear [them] , nor do [them] .
- Young's Literal Translation (YLT)
- because that they have not hearkened to the voice of Jehovah their God, and transgress His covenant — all that He commanded Moses, servant of Jehovah — yea, they have not hearkened nor done [it].
Read in context
- 10ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
- 11ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- 12ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
- 13ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
- 14ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
Cross references
- 2 Kings 17:7–23 2 ಅರಸುಗಳು 17:7–23ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು. ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು-- ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು. ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು. ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು. ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- Jeremiah 3:8 ಯೆರೆಮೀಯ 3:8ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
- Daniel 9:6–11 ದಾನಿಯೇಲನು 9:6–11ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
- Psalm 107:17 ಕೀರ್ತನೆಗಳು 107:17ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
- 2 Timothy 2:24 2 ತಿಮೊಥೆಯನಿಗೆ 2:24ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Hebrews 3:5–6 ಇಬ್ರಿಯರಿಗೆ 3:5–6ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Micah 3:4 ಮೀಕ 3:4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- Jeremiah 7:23 ಯೆರೆಮೀಯ 7:23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- 1 Kings 9:6 1 ಅರಸುಗಳು 9:6ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
- Isaiah 1:19 ಯೆಶಾಯ 1:19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Deuteronomy 8:20 ಧರ್ಮೋಪದೇಶಕಾಂಡ 8:20ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.