2 Kings · chapter 19 · verse 1
2 Kings 19:1 in Kannada
ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.
Arasanaada hijkeeyanu adannu kelidaaga tanna vastragalannu haridukondu goneetattininda tannannu muchchikondu kartana maneyalli praveshisidanu.
2 Kings 19:1 in English
- King James Version (KJV)
- And it came to pass, when king Hezekiah heard [it], that he rent his clothes, and covered himself with sackcloth, and went into the house of the LORD.
- World English Bible (WEB)
- When King Hezekiah heard it, he tore his clothes, covered himself with sackcloth, and went into the LORD’s house.
- American Standard Version (ASV)
- And it came to pass, when king Hezekiah heard it, that he rent his clothes, and covered himself with sackcloth, and went into the house of Jehovah.
- Bible in Basic English (BBE)
- And on hearing it, King Hezekiah took off his robe, and put on haircloth, and went into the house of the Lord.
- Darby Translation (DBY)
- And it came to pass when king Hezekiah heard [it], that he rent his garments, and covered himself with sackcloth, and went into the house of Jehovah.
- Webster's Bible (WBS)
- And it came to pass, when king Hezekiah heard [it] , that he rent his clothes, and covered himself with sackcloth, and went into the house of the LORD.
- Young's Literal Translation (YLT)
- And it cometh to pass, at king Hezekiah's hearing, that he rendeth his garments, and covereth himself with sackcloth, and entereth the house of Jehovah,
Read in context
- 1ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.
- 2ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
- 3ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
Cross references
- 2 Kings 18:37 2 ಅರಸುಗಳು 18:37ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
- 1 Kings 21:27 1 ಅರಸುಗಳು 21:27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
- Genesis 37:34 ಆದಿಕಾಂಡ 37:34ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
- Job 1:20–21 ಯೋಬನು 1:20–21ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Isaiah 37:1–7 ಯೆಶಾಯ 37:1–7ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು. ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು. ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು. ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು. ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು-- ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ. ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
- 2 Chronicles 32:20–22 2 ಪೂರ್ವಕಾಲವೃತ್ತಾಂತ 32:20–22ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು. ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು. ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
- 2 Chronicles 7:15–16 2 ಪೂರ್ವಕಾಲವೃತ್ತಾಂತ 7:15–16ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು. ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
- Esther 4:1–4 ಎಸ್ತೇರಳು 4:1–4ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು. ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ. ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು. ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
- 2 Kings 5:7 2 ಅರಸುಗಳು 5:7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- 1 Kings 21:29 1 ಅರಸುಗಳು 21:29ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
- 2 Kings 6:30 2 ಅರಸುಗಳು 6:30ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.
- Matthew 11:21 ಮತ್ತಾಯನು 11:21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.