2 Kings · chapter 19 · verse 17
2 Kings 19:17 in Kannada
ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.
Kartane, nishchayavaagi ashshoorina arasugalu janaangagalannoo avara deshagalannoo haalu maadi avara devarugalannu benkiyalli haakiddaare.
2 Kings 19:17 in English
- King James Version (KJV)
- Of a truth, LORD, the kings of Assyria have destroyed the nations and their lands,
- World English Bible (WEB)
- Truly, LORD, the kings of Assyria have laid waste the nations and their lands,
- American Standard Version (ASV)
- Of a truth, Jehovah, the kings of Assyria have laid waste the nations and their lands,
- Bible in Basic English (BBE)
- Truly, O Lord, the kings of Assyria have made waste the nations and their lands,
- Darby Translation (DBY)
- Of a truth, Jehovah, the kings of Assyria have laid waste the nations and their lands,
- Webster's Bible (WBS)
- Of a truth, LORD, the kings of Assyria have destroyed the nations and their lands,
- Young's Literal Translation (YLT)
- 'Truly, O Jehovah, kings of Asshur have laid waste the nations, and their land,
Read in context
- 15ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
- 16ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.
- 17ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.
- 18ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
- 19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
Cross references
- Isaiah 10:9–11 ಯೆಶಾಯ 10:9–11ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
- Daniel 2:47 ದಾನಿಯೇಲನು 2:47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- 2 Kings 17:24 2 ಅರಸುಗಳು 17:24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- Job 9:2 ಯೋಬನು 9:2ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Luke 22:59 ಲೂಕನು 22:59ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
- Jeremiah 26:15 ಯೆರೆಮೀಯ 26:15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- 1 Corinthians 14:25 1 ಕೊರಿಂಥದವರಿಗೆ 14:25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- Acts 4:27 ಅಪೊಸ್ತಲರ ಕೃತ್ಯಗಳು 4:27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- Isaiah 5:9 ಯೆಶಾಯ 5:9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
- 2 Kings 16:9 2 ಅರಸುಗಳು 16:9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.