2 Kings · chapter 19 · verse 32
2 Kings 19:32 in Kannada
ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
Aada darinda kartanu ashshoorina arasanannu kuritu heluvadenandare--avanu ee pattanadalli baru vadilla; alli baanavannu eseyuvadilla; guraani hididukondu adara munde seruvadilla; adakke virodhavaagi dinneyannu haakuvadilla.
2 Kings 19:32 in English
- King James Version (KJV)
- Therefore thus saith the LORD concerning the king of Assyria, He shall not come into this city, nor shoot an arrow there, nor come before it with shield, nor cast a bank against it.
- World English Bible (WEB)
- “Therefore the LORD says concerning the king of Assyria, ‘He will not come to this city, nor shoot an arrow there. He will not come before it with shield, nor cast up a mound against it.
- American Standard Version (ASV)
- Therefore thus saith Jehovah concerning the king of Assyria, He shall not come unto this city, nor shoot an arrow there, neither shall he come before it with shield, nor cast up a mound against it.
- Bible in Basic English (BBE)
- For this cause the Lord says about the king of Assyria, He will not come into this town, or send an arrow against it; he will not come before it with arms, or put up an earthwork against it;
- Darby Translation (DBY)
- Therefore thus saith Jehovah concerning the king of Assyria: He shall not come into this city, Nor shoot an arrow there, Nor come before it with shield, Nor cast a bank against it.
- Webster's Bible (WBS)
- Therefore thus saith the LORD concerning the king of Assyria, He shall not come into this city, nor shoot an arrow there, nor come before it with shield, nor cast a bank against it.
- Young's Literal Translation (YLT)
- Therefore, thus said Jehovah, Concerning the king of Asshur: He doth not come in unto this city, Nor doth he shoot there an arrow, Nor doth he come before it with shield. Nor doth he pour out against it a mount.
Read in context
- 30ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
- 31ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
- 32ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
- 33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
- 34ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
Cross references
- 2 Samuel 20:15 2 ಸಮುವೇಲನು 20:15ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
- Isaiah 8:7–10 ಯೆಶಾಯ 8:7–10ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು. ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Luke 19:43–44 ಲೂಕನು 19:43–44ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Ezekiel 21:22 ಯೆಹೆಜ್ಕೇಲನು 21:22ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
- Isaiah 10:24–25 ಯೆಶಾಯ 10:24–25ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ. ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
- Isaiah 10:28–32 ಯೆಶಾಯ 10:28–32ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ. ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು. ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು. ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು. ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
- Isaiah 37:33–35 ಯೆಶಾಯ 37:33–35ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ. ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ. ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.