2 Kings · chapter 19 · verse 34
2 Kings 19:34 in Kannada
ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
Nanna nimittavoo nanna sevakanaada daaveedana nimittavoo naanu ee pattanavannu kaapaadi adannu rakshisuvenu embade.
2 Kings 19:34 in English
- King James Version (KJV)
- For I will defend this city, to save it, for mine own sake, and for my servant David’s sake.
- World English Bible (WEB)
- ‘For I will defend this city to save it, for my own sake and for my servant David’s sake.’”
- American Standard Version (ASV)
- For I will defend this city to save it, for mine own sake, and for my servant David’s sake.
- Bible in Basic English (BBE)
- For I will keep this town safe, for my honour, and for the honour of my servant David.
- Darby Translation (DBY)
- And I will defend this city, to save it, For mine own sake, and for my servant David's sake.
- Webster's Bible (WBS)
- For I will defend this city, to save it, for my own sake, and for my servant David's sake.
- Young's Literal Translation (YLT)
- And I have covered over this city, To save it, for Mine own sake, And for the sake of David My servant.'
Read in context
- 32ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
- 33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
- 34ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
- 35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- 36ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
Cross references
- 1 Kings 11:12–13 1 ಅರಸುಗಳು 11:12–13ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು. ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 2 Kings 20:6 2 ಅರಸುಗಳು 20:6ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.
- 1 Kings 15:4 1 ಅರಸುಗಳು 15:4ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
- Isaiah 31:5 ಯೆಶಾಯ 31:5ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
- Jeremiah 33:26 ಯೆರೆಮೀಯ 33:26ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Isaiah 38:6 ಯೆಶಾಯ 38:6ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
- Jeremiah 33:21 ಯೆರೆಮೀಯ 33:21ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Ephesians 1:6 ಎಫೆಸದವರಿಗೆ 1:6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- Deuteronomy 32:27 ಧರ್ಮೋಪದೇಶಕಾಂಡ 32:27ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
- Isaiah 48:11 ಯೆಶಾಯ 48:11ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು.