2 Kings · chapter 19 · verse 36
2 Kings 19:36 in Kannada
ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
Ashshoorina arasanaada sanhereebanu hintirugihogi nineveyalli vaasa vaagiddanu.avanu tanna devaraada nisrokana maneyalli aaraadhisuttiruvaaga avana makkalaada adrammelekanoo sarecheranoo avanannu kattiyinda hodedu araraat deshakke tappisikondu hodaru. Avana maganaada esarhaddonanu avanige badalaagi arasanaadanu.
2 Kings 19:36 in English
- King James Version (KJV)
- So Sennacherib king of Assyria departed, and went and returned, and dwelt at Nineveh.
- World English Bible (WEB)
- So Sennacherib king of Assyria departed, went home, and lived at Nineveh.
- American Standard Version (ASV)
- So Sennacherib king of Assyria departed, and went and returned, and dwelt at Nineveh.
- Bible in Basic English (BBE)
- So Sennacherib, king of Assyria, went back to his place at Nineveh.
- Darby Translation (DBY)
- And Sennacherib king of Assyria departed, and went and returned, and abode at Nineveh.
- Webster's Bible (WBS)
- So Sennacherib king of Assyria departed, and went and returned, and dwelt at Nineveh.
- Young's Literal Translation (YLT)
- And Sennacherib king of Asshur journeyeth, and goeth, and turneth back, and dwelleth in Nineveh;
Read in context
- 34ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
- 35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- 36ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
- 37ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
Cross references
- Jonah 1:2 ಯೋನ 1:2ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
- 2 Kings 19:28 2 ಅರಸುಗಳು 19:28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- 2 Kings 19:33 2 ಅರಸುಗಳು 19:33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
- 2 Kings 19:7 2 ಅರಸುಗಳು 19:7ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
- Genesis 10:11–12 ಆದಿಕಾಂಡ 10:11–12ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ, ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು.
- Matthew 12:41 ಮತ್ತಾಯನು 12:41ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
- Nahum 1:1 ನಹೂಮ 1:1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
- Jonah 3:2–10 ಯೋನ 3:2–10ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು. ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು. ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು. ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ. ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Nahum 2:8 ನಹೂಮ 2:8ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.