2 Kings · chapter 2 · verse 11
2 Kings 2:11 in Kannada
ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
Avaru nadedu bandu maatanaadikondiruvaaga aadaddenandare, igo, benkiya rathavoo benkiya kudure galoo avaribbarannu vingadisidavu; eleeyanu birugaaliyalli aakaashakke erihodanu.
2 Kings 2:11 in English
- King James Version (KJV)
- And it came to pass, as they still went on, and talked, that, behold, [there appeared] a chariot of fire, and horses of fire, and parted them both asunder; and Elijah went up by a whirlwind into heaven.
- World English Bible (WEB)
- As they continued on and talked, behold, a chariot of fire and horses of fire separated them; and Elijah went up by a whirlwind into heaven.
- American Standard Version (ASV)
- And it came to pass, as they still went on, and talked, that, behold, [there appeared] a chariot of fire, and horses of fire, which parted them both asunder; and Elijah went up by a whirlwind into heaven.
- Bible in Basic English (BBE)
- And while they went on their way, going on talking together, suddenly there were carriages and horses of fire separating them from one another and Elijah went up to heaven in a great wind.
- Darby Translation (DBY)
- And it came to pass as they went on, and talked, that behold, a chariot of fire and horses of fire; and they parted them both asunder; and Elijah went up by a whirlwind into the heavens.
- Webster's Bible (WBS)
- And it came to pass, as they still went on, and talked, that behold, [there appeared] a chariot of fire, and horses of fire, and parted them both asunder; and Elijah went up by a whirlwind into heaven.
- Young's Literal Translation (YLT)
- And it cometh to pass, they are going, going on and speaking, and lo, a chariot of fire, and horses of fire, and they separate between them both, and Elijah goeth up in a whirlwind, to the heavens.
Read in context
- 9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
- 10ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
- 11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
- 12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
- 13ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.
Cross references
- 2 Kings 6:17 2 ಅರಸುಗಳು 6:17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
- Psalm 104:3–4 ಕೀರ್ತನೆಗಳು 104:3–4ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ. ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
- Psalm 68:17 ಕೀರ್ತನೆಗಳು 68:17ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Ezekiel 1:4–28 ಯೆಹೆಜ್ಕೇಲನು 1:4–28ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು. ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು. ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು. ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು. ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು. ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು. ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು. ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು. ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ. ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು. ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು. ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು. ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ. ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು. ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು. ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು. ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು). ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು. ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು. ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು. ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Ezekiel 10:9–22 ಯೆಹೆಜ್ಕೇಲನು 10:9–22ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು. ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ. ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು. ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು. ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು. ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- Mark 16:19 ಮಾರ್ಕನು 16:19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Habakkuk 3:8 ಹಬಕ್ಕೂಕ 3:8ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
- Zechariah 3:8 ಜೆಕರ್ಯ 3:8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- Genesis 5:24 ಆದಿಕಾಂಡ 5:24ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
- Zechariah 6:1–8 ಜೆಕರ್ಯ 6:1–8ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು. ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು; ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು. ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು. ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ. ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ. ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು. ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- 2 Kings 2:1 2 ಅರಸುಗಳು 2:1ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
Original words (Hebrew)
- still · H1980הָלַךְ hâlak
- on · H1980הָלַךְ hâlak
- talked · H1696דָבַר dâbar
- chariot · H7393רֶכֶב rekeb
- fire · H784אֵשׁ ʼêsh
- horses · H5483סוּס çûwç
- fire · H784אֵשׁ ʼêsh
- parted · H6504פָּרַד pârad
- both · H8147שְׁנַיִם shᵉnayim
- asunder · H996בֵּין bêyn
- Elijah · H452אֵלִיָּה ʼÊlîyâh
- up · H5927עָלָה ʻâlâh
- whirlwind · H5591סַעַר çaʻar
- heaven · H8064שָׁמַיִם shâmayim