2 Kings · chapter 2 · verse 21
2 Kings 2:21 in Kannada
ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
Avanu neeru buggeya balige horatuhogi adaralli uppu haaki heliddenandare--ee neerannu shuddha maadidenu; innu mele adarinda maranavoo banjetanavoo aagadiralendu kartanu heluttaane andanu.
2 Kings 2:21 in English
- King James Version (KJV)
- And he went forth unto the spring of the waters, and cast the salt in there, and said, Thus saith the LORD, I have healed these waters; there shall not be from thence any more death or barren [land].
- World English Bible (WEB)
- He went out to the spring of the waters, and threw salt into it, and said, “The LORD says, ‘I have healed these waters. There shall not be from there any more death or barren wasteland.’”
- American Standard Version (ASV)
- And he went forth unto the spring of the waters, and cast salt therein, and said, Thus saith Jehovah, I have healed these waters; there shall not be from thence any more death or miscarrying.
- Bible in Basic English (BBE)
- Then he went out to the spring from which the water came, and put salt in it, and said, The Lord says, Now I have made this water sweet; no longer will it be death-giving or unfertile.
- Darby Translation (DBY)
- And he went forth to the source of the waters, and cast the salt in there, and said, Thus saith Jehovah: I have healed these waters: there shall not be from thence any more death or barrenness.
- Webster's Bible (WBS)
- And he went forth to the spring of the waters, and cast the salt in there, and said, Thus saith the LORD, I have healed these waters; there shall not be from thence any more death or barren [land] .
- Young's Literal Translation (YLT)
- and he goeth out unto the source of the waters, and casteth there salt, and saith, 'Thus said Jehovah, I have given healing to these waters; there is not thence any more death and sterility.'
Read in context
- 19ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
- 20ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
- 21ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
- 22ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
- 23ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
Cross references
- Exodus 15:25–26 ವಿಮೋಚನಕಾಂಡ 15:25–26ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು. ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- 2 Kings 4:41 2 ಅರಸುಗಳು 4:41ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
- Leviticus 2:13 ಯಾಜಕಕಾಂಡ 2:13ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
- 2 Kings 6:6 2 ಅರಸುಗಳು 6:6ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Revelation 22:2–3 ಪ್ರಕಟನೆ 22:2–3ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು. ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
- Mark 9:50 ಮಾರ್ಕನು 9:50ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- John 9:6 ಯೋಹಾನನು 9:6ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
- 1 Corinthians 1:18–28 1 ಕೊರಿಂಥದವರಿಗೆ 1:18–28ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ. ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು. ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ. ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ. ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- Matthew 5:11 ಮತ್ತಾಯನು 5:11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- Psalm 107:33–38 ಕೀರ್ತನೆಗಳು 107:33–38ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ. ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ. ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ, ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು. ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
- Ezekiel 47:8–11 ಯೆಹೆಜ್ಕೇಲನು 47:8–11ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು. ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು, ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.