2 Kings · chapter 2 · verse 8
2 Kings 2:8 in Kannada
ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
Eleeyanu tanna hodikeyannu tegedu madachikondu neerannu hodedanu. Aaga aa neeru vibhaagavaadadarinda avaribbaroo ona bhoomiya mele daatihodaru.
2 Kings 2:8 in English
- King James Version (KJV)
- And Elijah took his mantle, and wrapped [it] together, and smote the waters, and they were divided hither and thither, so that they two went over on dry ground.
- World English Bible (WEB)
- Elijah took his mantle, and rolled it up, and struck the waters; and they were divided here and there, so that they both went over on dry ground.
- American Standard Version (ASV)
- And Elijah took his mantle, and wrapped it together, and smote the waters, and they were divided hither and thither, so that they two went over on dry ground.
- Bible in Basic English (BBE)
- Then Elijah took off his robe, and, rolling it up, gave the water a blow with it, and the waters were parted, flowing back this way and that, so that they went over on dry land.
- Darby Translation (DBY)
- And Elijah took his mantle, and wrapped it together, and smote the waters, and they were divided hither and thither; and they two went over on dry ground.
- Webster's Bible (WBS)
- And Elijah took his mantle, and wrapped [it] together, and smote the waters, and they were divided hither and thither, so that they two went over on dry ground.
- Young's Literal Translation (YLT)
- And Elijah taketh his robe, and wrappeth [it] together, and smiteth the waters, and they are halved, hither and thither, and they pass over both of them on dry land.
Read in context
- 6ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
- 7ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
- 8ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
- 9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
- 10ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
Cross references
- 1 Kings 19:19 1 ಅರಸುಗಳು 19:19ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
- Exodus 14:21–22 ವಿಮೋಚನಕಾಂಡ 14:21–22ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
- Joshua 3:14–17 ಯೆಹೋಶುವ 3:14–17ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು. ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- 2 Kings 2:14 2 ಅರಸುಗಳು 2:14ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
- Psalm 114:5–7 ಕೀರ್ತನೆಗಳು 114:5–7ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Hebrews 11:29 ಇಬ್ರಿಯರಿಗೆ 11:29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
- Isaiah 11:15 ಯೆಶಾಯ 11:15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- 1 Kings 19:13 1 ಅರಸುಗಳು 19:13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
- Revelation 16:12 ಪ್ರಕಟನೆ 16:12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.