2 Kings · chapter 22 · verse 16
2 Kings 22:16 in Kannada
ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
Andare yehoodada arasanu odida pustakada maatuga lannellaa baramaaduvenu.
2 Kings 22:16 in English
- King James Version (KJV)
- Thus saith the LORD, Behold, I will bring evil upon this place, and upon the inhabitants thereof, [even] all the words of the book which the king of Judah hath read:
- World English Bible (WEB)
- “The LORD says, ‘Behold, I will bring evil on this place and on its inhabitants, even all the words of the book which the king of Judah has read.
- American Standard Version (ASV)
- Thus saith Jehovah, Behold, I will bring evil upon this place, and upon the inhabitants thereof, even all the words of the book which the king of Judah hath read.
- Bible in Basic English (BBE)
- These are the words of the Lord: See, I will send evil on this place and on its people, even everything which the king of Judah has been reading in the book;
- Darby Translation (DBY)
- Thus saith Jehovah: Behold, I will bring evil upon this place and upon the inhabitants thereof, all the words of the book that the king of Judah hath read.
- Webster's Bible (WBS)
- Thus saith the LORD, Behold, I will bring evil upon this place, and upon its inhabitants, [even] all the words of the book which the king of Judah hath read:
- Young's Literal Translation (YLT)
- Thus said Jehovah, Lo, I am bringing in evil unto this place and on its inhabitants, all the words of the book that the king of Judah hath read,
Read in context
- 14ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
- 15ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು
- 16ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
- 17ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
- 18ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
Cross references
- Daniel 9:11–14 ದಾನಿಯೇಲನು 9:11–14ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Joshua 23:15 ಯೆಹೋಶುವ 23:15ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Deuteronomy 29:18–23 ಧರ್ಮೋಪದೇಶಕಾಂಡ 29:18–23ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು. ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Deuteronomy 29:27 ಧರ್ಮೋಪದೇಶಕಾಂಡ 29:27ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
- Deuteronomy 28:15–68 ಧರ್ಮೋಪದೇಶಕಾಂಡ 28:15–68ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು. ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- 2 Kings 25:1–4 2 ಅರಸುಗಳು 25:1–4ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು. ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- 2 Kings 21:12–13 2 ಅರಸುಗಳು 21:12–13ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು. ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- Joshua 23:13 ಯೆಹೋಶುವ 23:13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- Deuteronomy 31:16–18 ಧರ್ಮೋಪದೇಶಕಾಂಡ 31:16–18ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
- Deuteronomy 32:15–26 ಧರ್ಮೋಪದೇಶಕಾಂಡ 32:15–26ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- 2 Chronicles 34:24–25 2 ಪೂರ್ವಕಾಲವೃತ್ತಾಂತ 34:24–25ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು. ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
- Deuteronomy 30:17–18 ಧರ್ಮೋಪದೇಶಕಾಂಡ 30:17–18ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.