2 Kings · chapter 23 · verse 18
2 Kings 23:18 in Kannada
ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.
Aaga avanu--avanannu bittubidiri; yaavanoo avana elubugalannu muttade irali andanu. Haageye avaru avana elubugalannu samaarya dinda banda pravaadiya elubugala sangada summane bittaru.
2 Kings 23:18 in English
- King James Version (KJV)
- And he said, Let him alone; let no man move his bones. So they let his bones alone, with the bones of the prophet that came out of Samaria.
- World English Bible (WEB)
- He said, “Let him be! Let no one move his bones.” So they let his bones alone, with the bones of the prophet who came out of Samaria.
- American Standard Version (ASV)
- And he said, Let him be; let no man move his bones. So they let his bones alone, with the bones of the prophet that came out of Samaria.
- Bible in Basic English (BBE)
- So he said, Let him be; let not his bones be moved. So they let his bones be with the bones of the prophet who came from Samaria.
- Darby Translation (DBY)
- And he said, Let him alone; let no man move his bones. And they saved his bones, with the bones of the prophet that came out of Samaria.
- Webster's Bible (WBS)
- And he said, Let him alone; let no man move his bones. So they let his bones alone, with the bones of the prophet that came out of Samaria.
- Young's Literal Translation (YLT)
- And he saith, 'Let him alone, let no man touch his bones;' and they let his bones escape, with the bones of the prophet who came out of Samaria.
Read in context
- 16ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.
- 17ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.
- 18ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.
- 19ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,
- 20ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
Cross references
- 1 Kings 13:31 1 ಅರಸುಗಳು 13:31ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.
- 1 Kings 13:1–22 1 ಅರಸುಗಳು 13:1–22ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು. ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು. ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು. ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು. ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು. ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು. ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು. ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ. ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು. ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು. ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು; ಅವನು ಅರಸನಿಗೆ ಹೇಳಿದ ಮಾತುಗಳನ್ನು ಸಹ ತಮ್ಮ ತಂದೆಗೆ ತಿಳಿಸಿದರು. ಆಗ ಅವರ ತಂದೆ ಅವ ರಿಗೆ--ಅವನು ಯಾವ ಮಾರ್ಗವಾಗಿ ಹೋದನು ಅಂದನು. ಯಾಕಂದರೆ ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳು ನೋಡಿದ್ದರು. ಅವನು ತನ್ನ ಮಕ್ಕಳಿಗೆಕತ್ತೆಗೆ ತಡಿ ಹಾಕಿರಿ ಅಂದನು. ಅವರು ಕತ್ತೆಗೆ ತಡಿ ಹಾಕಿದರು; ಅವನು ಅದರ ಮೇಲೆ ಏರಿ ದೇವರ ಮನುಷ್ಯನ ಹಿಂದೆ ಹೋಗಿ ಅವನು ಏಲಾ ಮರದ ಕೆಳಗೆ ಕುಳಿತುಕೊಳ್ಳುವಾಗ ಅವನನ್ನು ಕಂಡು ಕೊಂಡನು. ಆಗ ಅವನು--ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ ಅಂದನು. ಅದಕ್ಕ ವನು--ನಾನೇ ಅಂದನು. ಆಗ ಅವನಿಗೆ--ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು ಅಂದನು. ಅದಕ್ಕವನು--ನಾನು ನಿನ್ನ ಸಂಗಡ ಹಿಂತಿರುಗಲೂ ಕೂಡದು, ಒಳಗೆ ಹೋಗಲೂ ಕೂಡದು; ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವದಿಲ್ಲ, ನೀರು ಕುಡಿಯು ವದಿಲ್ಲ. ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು. ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು. ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು. ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು.