2 Kings · chapter 24 · verse 13
2 Kings 24:13 in Kannada
ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
Kartanu helida prakaarave avanu allinda kartana maneya ellaa bokkasagalannoo aramaneya bokkasagalannoo israayelina arasanaada solomonanu kartana maneyalli maadida bangaarada ellaa paatregalannoo tundu tundaagi kattarisibittanu.
2 Kings 24:13 in English
- King James Version (KJV)
- And he carried out thence all the treasures of the house of the LORD, and the treasures of the king’s house, and cut in pieces all the vessels of gold which Solomon king of Israel had made in the temple of the LORD, as the LORD had said.
- World English Bible (WEB)
- He carried out from there all the treasures of the LORD’s house and the treasures of the king’s house, and cut in pieces all the vessels of gold which Solomon king of Israel had made in the LORD’s temple, as the LORD had said.
- American Standard Version (ASV)
- And he carried out thence all the treasures of the house of Jehovah, and the treasures of the king’s house, and cut in pieces all the vessels of gold, which Solomon king of Israel had made in the temple of Jehovah, as Jehovah had said.
- Bible in Basic English (BBE)
- And he took away all the stored wealth of the Lord's house, and the goods from the king's store-house, cutting up all the gold vessels which Solomon, king of Israel, had made in the house of the Lord, as the Lord had said.
- Darby Translation (DBY)
- And he brought out thence all the treasures of the house of Jehovah, and the treasures of the king's house, and cut in pieces all the vessels of gold that Solomon king of Israel had made in the temple of Jehovah, as Jehovah had said.
- Webster's Bible (WBS)
- And he carried out thence all the treasures of the house of the LORD, and the treasures of the king's house, and cut in pieces all the vessels of gold which Solomon king of Israel had made in the temple of the LORD, as the LORD had said.
- Young's Literal Translation (YLT)
- and bringeth out thence all the treasures of the house of Jehovah, and the treasures of the house of the king, and cutteth in pieces all the vessels of gold that Solomon king of Israel made in the temple of Jehovah, as Jehovah had spoken.
Read in context
- 11ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
- 12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
- 13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- 14ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
- 15ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
Cross references
- Isaiah 39:6 ಯೆಶಾಯ 39:6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
- Jeremiah 20:5 ಯೆರೆಮೀಯ 20:5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
- 2 Kings 20:17 2 ಅರಸುಗಳು 20:17ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
- 1 Kings 7:48–50 1 ಅರಸುಗಳು 7:48–50ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು, ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- Daniel 5:2–3 ದಾನಿಯೇಲನು 5:2–3ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
- 2 Kings 25:13–15 2 ಅರಸುಗಳು 25:13–15ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು. ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
- Jeremiah 27:16–21 ಯೆರೆಮೀಯ 27:16–21ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು? ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ-- ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
- 2 Chronicles 4:7–22 2 ಪೂರ್ವಕಾಲವೃತ್ತಾಂತ 4:7–22ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು. ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು. ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು. ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು. ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು. ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು. ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು. ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು. ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು. ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
- Ezra 1:7–11 ಎಜ್ರನು 1:7–11ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು. ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು. ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು. ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
- Jeremiah 28:3–4 ಯೆರೆಮೀಯ 28:3–4ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
- Jeremiah 28:6 ಯೆರೆಮೀಯ 28:6ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
Original words (Hebrew)
- out · H3318יָצָא yâtsâʼ
- treasures · H214אוֹצָר ʼôwtsâr
- house · H1004בַּיִת bayith
- treasures · H214אוֹצָר ʼôwtsâr
- king’s · H4428מֶלֶךְ melek
- house · H1004בַּיִת bayith
- pieces · H7112קָצַץ qâtsats
- vessels · H3627כְּלִי kᵉlîy
- gold · H2091זָהָב zâhâb
- Solomon · H8010שְׁלֹמֹה Shᵉlômôh
- king · H4428מֶלֶךְ melek
- Israel · H3478יִשְׂרָאֵל Yisrâʼêl
- made · H6213עָשָׂה ʻâsâh
- temple · H1964הֵיכָל hêykâl
- said · H1696דָבַר dâbar