2 Kings · chapter 24 · verse 20
2 Kings 24:20 in Kannada
ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
Kartanu avarannu tanna sammukhadinda dobbi haakuva varege yeroosalemina mattu yehoodada mele untaada aatana kopada nimitta chidkeeyanu baabelina arasana mele tirugibiddanu.
2 Kings 24:20 in English
- King James Version (KJV)
- For through the anger of the LORD it came to pass in Jerusalem and Judah, until he had cast them out from his presence, that Zedekiah rebelled against the king of Babylon.
- World English Bible (WEB)
- For through the anger of the LORD, this happened in Jerusalem and Judah, until he had cast them out from his presence. Then Zedekiah rebelled against the king of Babylon.
- American Standard Version (ASV)
- For through the anger of Jehovah did it come to pass in Jerusalem and Judah, until he had cast them out from his presence. And Zedekiah rebelled against the king of Babylon.
- Bible in Basic English (BBE)
- And because of the wrath of the Lord, this came about in Jerusalem and Judah, till he had sent them all away from before him: and Zedekiah took up arms against the king of Babylon.
- Darby Translation (DBY)
- For, because the anger of Jehovah was against Jerusalem and against Judah, until he had cast them out from his presence, Zedekiah rebelled against the king of Babylon.
- Webster's Bible (WBS)
- For through the anger of the LORD it came to pass in Jerusalem and Judah, until he had cast them out from his presence, that Zedekiah rebelled against the king of Babylon.
- Young's Literal Translation (YLT)
- for, by the anger of Jehovah it hath been against Jerusalem and against Judah, till he cast them out from His presence, that Zedekiah rebelleth against the king of Babylon.
Read in context
- 18ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
- 19ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
- 20ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
Cross references
- 2 Chronicles 36:13 2 ಪೂರ್ವಕಾಲವೃತ್ತಾಂತ 36:13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
- 2 Thessalonians 2:9–11 2 ಥೆಸಲೊನೀಕದವರಿಗೆ 2:9–11ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- Jeremiah 27:12–15 ಯೆರೆಮೀಯ 27:12–15ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ. ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ? ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
- Exodus 9:14–17 ವಿಮೋಚನಕಾಂಡ 9:14–17ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು. ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು. ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ. ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- 2 Kings 22:17 2 ಅರಸುಗಳು 22:17ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
- Ezekiel 17:15–20 ಯೆಹೆಜ್ಕೇಲನು 17:15–20ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
- Jeremiah 38:17–21 ಯೆರೆಮೀಯ 38:17–21ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು. ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು. ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--
- Isaiah 19:11–14 ಯೆಶಾಯ 19:11–14ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ. ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Deuteronomy 29:27 ಧರ್ಮೋಪದೇಶಕಾಂಡ 29:27ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
- Deuteronomy 2:30 ಧರ್ಮೋಪದೇಶಕಾಂಡ 2:30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.